ಡಿವಿಜಿ ಸುದ್ದಿ, ದಾವಣಗೆರೆ: ಕಳೆದ 30 ದಿನದಿಂದ ಯಾವುದೇ ಒಂದು ಪ್ರಕರಣ ಇಲ್ಲದೆ ಗ್ರೀನ್ ಜೋನ್ ನಲ್ಲಿದ್ದ ದಾವಣಗೆರೆ ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ನಗರದ ಭಾಷಾನಗರದಲ್ಲಿ ನರ್ಸ್ ಒಬ್ಬರಿಗೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಜನರಲ್ಲಿ ಆತಂಕ ಮೂಡಿಸಿದೆ.
ಕೊರೊನಾ ಪತ್ತೆಯಾದ ಭಾಷಾನಗದಲ್ಲಿ ಇಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ರೌಂಡ್ಸ್ ಹಾಕಿ ಅಲ್ಲಿನ ಜನರಲ್ಲಿ ಜಾಗೃತಿ ವಹಿಸುವಂತೆ ಸೂಚನೆ ನೀಡಿದರು. ಭಾಷಾನಗರ ಮತ್ತು ಅದರ ಸುತ್ತಮುತ್ತಲಿನ ಪ್ರದೇಶವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ ಎಂದು ಎಚ್ಚರಿಕೆ ನೀಡಿದರು.
ಯಾರು ಕೂಡ ಮನೆಯಿಂದ ಹೊರ ಬರುವಂತಿಲ್ಲ. ನೀವು ಏನಾದ್ರೂ ಮನೆಯಿಂದ ಹೊರ ಬಂದರೆ, ನಿಮ್ಮ ಜೀವ ನಿಮ್ಮ ಕೈಯಲ್ಲಿ ಇರುವುದಿಲ್ಲ ಎಂದು ಭಾಷಾನಗರ ನಿವಾಸಿಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಖಡಕ್ ಎಚ್ಚರಿಕೆ ನೀಡಿದರು.
ಕೊರೊನಾ ಪಾಸಿಟಿವ್ ಪತ್ತೆಯಾದ ನರ್ಸ್ ನಿವಾಸಕ್ಕೆ ಭೇಟಿ ನೀಡಿ, ಮನೆಯನ್ನು ಸೀಲ್ ಮಾಡಲಾಯಿತು. ಸುತ್ತಮುತ್ತಲಿನ ನಿವಾಸಿಗಳಿಗೆ ಜಾಗೃತಿ ವಹಿಸುವಂತೆ ಸೂಚಿಸಲಾಯಿತು.
https://www.facebook.com/permalink.php?story_fbid=227331035360446&id=105586904201527