ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 68ಕ್ಕೆ ಏರಿಕೆಯಾಗಿದೆ.
ಕಳೆದ ಒಂದು ವಾರದಿಂದ ಸತತವಾಗಿ ಜಿಲ್ಲೆಯಲ್ಲಿ ಏರಿಕೆಯಾಗುತ್ತಿರುವ ಕೊರೊನಾ ಸೋಂಕು, ಇಂದು ಕೂಡ ಒಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈತ ಅಜ್ಮೀರ್ ಗೆ ಹೋಗಿ ಬಂದಿತ್ತ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಒಟ್ಟು 68 ಕೊರೊನಾ ಪಾಸಿಟಿವ್ ಪ್ರಕರಣಗಳಿದ್ದು, ಅದರಲ್ಲಿ 4 ಮಂದಿ ಮೃತಪಟ್ಟಿದ್ದಾರೆ. ಇಬ್ಬರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಇನ್ನು 62 ಸಕ್ರಿಯ ಸೋಂಕಿತರಿದ್ದಾರೆ.



