ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯಲ್ಲಿ ಇಂದು ಮತ್ತೊಂದು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 89 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿವ್ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ನಿನ್ನೆ ಯಾವುದೇ ಪ್ರಕರಣ ದಾಖಲಾಗಿಲ್ಲದ ಜಿಲ್ಲೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದ ದಾವಣಗೆರೆಗೆ ಮತ್ತೊಂದು ಪ್ರಕರಣ ಪತ್ತೆಯಾಗುವ ಮೂಲಕ ಮತ್ತೆ ದಾವಣಗೆರೆ ಜನರಲ್ಲಿ ಆತಂಕ ಉಂಟು ಮಾಡಿದೆ. 65 ವರ್ಷದ ಮಹಿಳೆಗೆ (1061) ಇಂದು ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಬಾಷಾನಗರದ ನರ್ಸ್ (ಪಿ-533) ಜೊತೆ ದ್ವಿತೀಯ ಸಂಪರ್ಕ ಹೊಂದಿದ್ದ ಮಹಿಳೆಯಾಗಿದ್ದಾರೆ
ಜಿಲ್ಲೆಯಲ್ಲಿ ಇದುವರೆಗೆ 89 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಇದರಲ್ಲಿ 4 ಜನ ಮೃತಪಟ್ಟಿದ್ದಾರೆ. ಇಬ್ಬರು ಗುಣಮುಖರಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ 83 ಸಕ್ರಿಯ ಪಾಸಿಟಿವ್ ಪ್ರಕರಣಗಳಿವೆ.
Mid day Bulletin 16/05/2020.@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMM @CCBBangalore @BlrCityPolice @KarnatakaVarthe @PIBBengaluru @KarFireDept @BMTC_BENGALURU pic.twitter.com/SRKOX3lrP9
— Karnataka Health Department (@DHFWKA) May 16, 2020



