Connect with us

Dvgsuddi Kannada | online news portal | Kannada news online

ದಾವಣಗೆರೆ: ಕೊರೊನಾ ವೈರಸ್ ನಿಂದ ಗುಣಮುಖರಾದ ಮೂವರು ಡಿಸ್ಚಾರ್ಚ್

ಪ್ರಮುಖ ಸುದ್ದಿ

ದಾವಣಗೆರೆ: ಕೊರೊನಾ ವೈರಸ್ ನಿಂದ ಗುಣಮುಖರಾದ ಮೂವರು ಡಿಸ್ಚಾರ್ಚ್

ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್ ನಿಂದ ಗುಣಮುಖರಾದ 7 ಜನರಲ್ಲಿ 3 ಜನರನ್ನುಇಂದು ಜಿಲ್ಲಾಡಳಿತದಿಂದ ಬಿಡುಗಡೆ ಮಾಡಲಾಯಿತು.

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿದ್ದ 3 ಕೋವಿಡ್ ಸೋಂಕಿತರನ್ನು ಬಿಡುಗಡೆ ಮಾಡಲಾಯಿತು.  ಗುಣಮುಖರಾದ ಮೂವರಿಗೆ  ಪುಷ್ಪ ನಮನ ಸಲ್ಲಿಸಲಾಯಿತು.

ಪಿ-585, ಪಿ-616 ಹಾಗೂ ಪಿ-635  ಆಸ್ಪತ್ರೆಯಿಂದ ಸಂಪೂರ್ಣವಾಗಿ ಗುಣಮುಖರಾಗಿ ಬಿಡುಗಡೆಯಾದ ಕೋವಿಡ್ 19 ರೋಗಿಗಳಾಗಿದ್ದಾರೆ. ಈ ಹಿಂದೆ ನರ್ಸ್‌ ಸಂಪರ್ಕದಿಂದ ಅವರಿಗೆ ಸೋಂಕು ದೃಢಪಟ್ಟಿತ್ತು.

ಇಂದು ಡಿಸ್ಚಾರ್ಜ್ ಆದ ಎಲ್ಲರೂ  ಬಾಷಾನಗರದ ನಿವಾಸಿಗಳಾಗಿದ್ದಾರೆ. ಮೇ. 1 ರಂದು ಕರೊನಾ ಪಾಸಿಟಿವ್‌ ದೃಢಪಟ್ಟ ನರ್ಸ್‌ನ 16 ವರ್ಷದ ಪುತ್ರ  ಪಿ-585, ಮೇ. 4 ರಂದು ಪಾಸಿಟಿವ್‌ ದೃಢಪಟ್ಟ ಪಿ-616, 52 ವರ್ಷ, ಮಹಿಳೆ, ಪಿ-635, 11 ವರ್ಷದ ಬಾಲಕ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾತನಾಡಿ, ಮೊದಲ ಹಂತವಾಗಿ 3 ಜನರನ್ನು ಬಿಡುಗಡೆ ಮಾಡಿದ್ದೇವೆ. ಸರ್ಕಾರ 7 ಜನರಿಗೆ ಬಿಡುಗಡೆಗೆ ಅನುಮತಿ ಕೊಟ್ಟಿದೆ. ಆದರೆ, 4 ಜನ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಕಳುಹಿಸಲಾಗಿದೆ  ಎಂದರು.

ಇದಲ್ಲದೆ ಇನ್ನು 12 ಜನ ಗುಣಮುಖರಾಗಿದ್ದಾರೆ. ಅವರನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಅನುಮತಿ ಕೇಳಿದ್ದೇವೆ. ಸರ್ಕಾರ ಅನುಮತಿ ಕೊಟ್ಟ ನಂತರ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು. ಜನರು ಕೊರೊನಾ ಸೋಂಕಿನ ಬಗ್ಗೆ ಭಯಗೊಳ್ಳುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಎಸ್ ಪಿ ಹನುಮಂತರಾಯ, ಡಿಎಚ್ ಒ ಡಾ. ರಾಘವೇಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ರಾಘವನ್, ಡಾ. ಸುಭಾಷ್ ಚಂದ್ರ ಉಪಸ್ಥಿತರಿದ್ದರು.

ದಾವಣಗೆರೆ: ಕೊರೊನಾ ವೈರಸ್ ನಿಂದ ಗುಣಮುಖರಾದ ಮೂರು ಡಿಸ್ಚಾರ್ಚ್ ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್ ನಿಂದ ಗುಣಮುಖರಾದ 7 ಜನರಲ್ಲಿ 3…

Posted by Dvgsuddi on Wednesday, May 20, 2020

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top