Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ಸೀಲ್ ಡೌನ್  ಕಣ್ಗಾವಲಿಗೆ ಬಂತು ಡ್ರೋಣ್ ಕ್ಯಾಮರಾ

ಪ್ರಮುಖ ಸುದ್ದಿ

ದಾವಣಗೆರೆಯಲ್ಲಿ ಸೀಲ್ ಡೌನ್  ಕಣ್ಗಾವಲಿಗೆ ಬಂತು ಡ್ರೋಣ್ ಕ್ಯಾಮರಾ

ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್ ಸೋಂಕು ನಿಯಂತ್ರಣದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ 5 ಕಂಟೈನ್‍ಮೆಂಟ್ ಝೋನ್‍ಗಳನ್ನು ಈಗಾಗಲೇ ಸೀಲ್‍ಡೌನ್ ಮಾಡಲಾಗಿದ್ದು, ಅಲ್ಲಿನ ಜನರ ಸ್ಥಿತಿಗತಿ ಪರಿಶೀಲಿಸಲು ಜಿಲ್ಲಾಡಳಿತದಿಂದ ಡ್ರೋನ್‍ಗಳ ಬಳಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ತಂಡದೊಂದಿಗೆ ಸೀಲ್‍ಡೌನ್ ಪ್ರದೇಶ ಜಾಲಿನಗರದಲ್ಲಿ ಡ್ರೋನ್ ಪರಿವೀಕ್ಷಣೆ ಮತ್ತು ಸರ್ವೇಕ್ಷಣಾ ತಂಡದ ತಪಾಸಣೆ ಬಳಿಕ ಮಾತನಾಡಿದ ಅವರು, ಜನರು ಗುಂಪು ಸೇರುವುದನ್ನು ನಿಯಂತ್ರಿಸಲು ಹಾಗೂ ಅವರಿಗೆ ಎಚ್ಚರಿಸಲು ಡ್ರೋನ್ ಬಳಕೆ ಮಾಡಲಾಗಿದೆ ಎಂದರು.

ಜನರು ತಮ್ಮ ಮನೆಗಳಲ್ಲಿ ಇದ್ದಾರಾ ಅಥವಾ ರಸ್ತೆಯಲ್ಲಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದಾರ, ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಂಡಿರುವುದರ ಬಗ್ಗೆ ಪರಿಶೀಲಿಸಲು ಡ್ರೋನ್ ಕ್ಯಾಮೆರಾದ ಸಹಾಯ ತೆಗೆದುಕೊಂಡಿದ್ದೇವೆ . ಅತ್ಯಂತ ಹೆಚ್ಚಿನ ರೆಸಲ್ಯೂಷನ್ ಇರುವಂತಹ ಈ ಡ್ರೋನ್ ಕ್ಯಾಮೆರಾದ ಸಹಾಯದಿಂದ ಇಲ್ಲಿಯೇ ನಿಂತು ಎಲ್ಲೆಡೆ ಏನೇನು ನಡೆಯುತ್ತಿದೆ ಎಂದು ತಿಳಿಯಬಹುದಾಗಿದೆ ಎಂದು ತಿಳಿಸಿದರು.

ಎಲ್ಲ ರೀತಿಯ ಉನ್ನತ ಮಟ್ಟದ ತಂತ್ರಜ್ಞಾನ ಹಾಗೂ ಮಾನವ ಸಂಪನ್ಮೂಲ ಬಳಸಿಕೊಳ್ಳುವ ಮೂಲಕ ಹಾಗೂ ಜಿಲ್ಲೆಯಲ್ಲಿ ಇರುವಂತಹ ವೈದ್ಯಕೀಯ ಸೌಲಭ್ಯದೊಂದಿಗೆ ನಾವು ವ್ಯವಸ್ಥಿತವಾಗಿ ಕೊರೊನಾ ನಿಯಂತ್ರಣ ಮಾಡುವ ವಿಶ್ವಾಸವಿದೆ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top