ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಕೂಡ 132 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3278ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾದಿಂದ 61 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಗುಣಮುಖರಾದವರ ಸಂಖ್ಯೆ 2109ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾದಿಂದ ಇಬ್ಬರು ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಕೇಸ್ ಗಳಲ್ಲಿ ದಾವಣಗೆರೆಯಲ್ಲಿ ಅಧಿಕ 99 ಕೇಸ್ ಗಳು ಪತ್ತೆಯಾಗಿದ್ದು, ಹರಿಹರ 12, ಜಗಳೂರು 04, ಚನ್ನಗಿರಿ 06 ಹೊನ್ನಾಳಿ 07 ಹಾಗೂ ಹೊರ ಜಿಲ್ಲೆಯಿಂದ ಬಂದ 04 ಮಂದಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ದಾವಣಗೆರೆಯ ಪಿ.ಜೆ ಬಡಾವಣೆಯ 70 ವರ್ಷದ ವೃದ್ಧೆ ಹಾಗೂ ದಾವಣಗೆರೆಯ ಅವರಗೆರೆಯ 70 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ .



