Connect with us

Dvgsuddi Kannada | online news portal | Kannada news online

ರಾಣೇಬೆನ್ನೂರು ಮೂಲದ ವ್ಯಕ್ತಿ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಸಾವು

ಜಿಲ್ಲಾ ಸುದ್ದಿ

ರಾಣೇಬೆನ್ನೂರು ಮೂಲದ ವ್ಯಕ್ತಿ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಸಾವು

 ಡಿವಿಜಿ ಸುದ್ದಿ, ಹಾವೇರಿ : ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ರಾಣೇಬೆನ್ನೂರು ಮೂಲದ  55 ವರ್ಷದ ವ್ಯಕ್ತಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾನೆ.  ಇದರಿಂದ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಆತಂಕ ಹೆಚ್ಚಾಗಿದೆ.

ಸಾವನ್ನಪ್ಪಿದ್ದ ವ್ಯಕ್ತಿ ರಾಣೇಬೆನ್ನೂರು ಮೂಲದವರಾಗಿದ್ದು ಜೂನ್ 29ರಂದು ಮಗನ ಮದುವೆ ಮಾಡಿದ್ದರು. ಜುಲೈ 3ರಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ನಡೆದ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿಯೂ ಭಾಗಿಯಾಗಿದ್ದರು.

ಜುಲೈ 4ರಂದು ಸರ್ಕಾರಿ ಆಸ್ಪತ್ರೆಗೆ ತೆರಳಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಜ್ವರ ಹೆಚ್ಚಾಗಿದ್ದರಿಂದ ಸೋಂಕಿತ ಜುಲೈ 5 ರಂದು ರಾಣೆಬೆನ್ನೂರು ತಾಲೂಕಿನ ಅಸುಂಡಿ ಗ್ರಾಮದ ಖಾಸಗಿ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದಾರೆ. ಮಂಗಳವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ದಾವಣಗೆರೆಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತ ಸೋಂಕಿತನ ಜೊತೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದ್ದ 50ಕ್ಕೂ ಅಧಿಕ ಜನರಿಗೆ ಕ್ವಾರಂಟೈನ್  ಮಾಡಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಿಲ್ಲಾ ಸುದ್ದಿ

To Top