ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಇಂದು ಕೊರೊನಾ ಸ್ಫೋಟ ಸಂಭವಿಸಿದ್ದು, ಬರೋಬ್ಬರಿ 62 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 807ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 11 ಜನ ಗುಣಮುಖರಾಗಿದ್ದು, ಒಟ್ಟು 571 ಮಂದಿ ಗುಣಮುಖರಾಗಿದ್ದಾರೆ.
ಇಂದು ಕೂಡ ಇಬ್ಬರು ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು 29 ಮಂದಿ ಸಾವನ್ನಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 207 ಸಕ್ರಿಯ ಪ್ರಕರಣಗಳಿವೆ.



