ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಅಬ್ಬರ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ . ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು ಜಿಲ್ಲೆಯಲ್ಲಿ ಬರೋಬ್ಬರಿ 224 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯ ಜನರಲ್ಲಿ ಇನ್ನಷ್ಟು ಆತಂಕ ಹೆಚ್ಚಾಗುವಂತೆ ಮಾಡಿದೆ.
ಜಿಲ್ಲೆಯಲ್ಲಿ ಇದುವರೆಗೆ 2843 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಅದರಲ್ಲಿ 1,745 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಕೂಡ 91 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಮಾತ್ರ ನಿಯಂತ್ರಕ್ಕೆ ಬರುತ್ತಿಲ್ಲ. ಒಂದೇ ದಿನ 06 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಮೃತರ ಸಂಖ್ಯೆ 68ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನು 1030 ಸಕ್ರಿಯ ಕೇಸ್ ಗಳಿವೆ.
ಇಂದು ಪತ್ತೆಯಾದ 224 ಕೇಸ್ ಗಳಲ್ಲಿ ದಾವಣಗೆರೆಯಲ್ಲಿ ಅಧಿಕ 140, ಹರಿಹರ 37, ಜಗಳೂರು 06, ಚನ್ನಗಿರಿ 22, ಹೊನ್ನಾಳಿ 10, ಹೊರ ಜಿಲ್ಲೆಯ 09 ಕೇಸ್ ಗಳು ಪತ್ತೆಯಾಗಿವೆ.
ಇನ್ನು ಪಿಜೆ ಬಡಾವಣೆ 75 ವರ್ಷದ ವೃದ್ಧ, ಹೊಂಡದ ಸರ್ಕಲ್ ಬಳಿಯ 62 ವರ್ಷದ ವೃದ್ಧ, 46 ವರ್ಷ ಪುರುಷ , ಎಸ್ ಎಸ್ ಬಡಾವಣೆಯ 49 ವರ್ಷದ ಪುರುಷ , ಚನ್ನಗಿರಿಯ ಕತ್ತಲಗೆರೆ ಗ್ರಾಮದ 38 ವರ್ಷದ ಪುರುಷ ಹಾಗೂ ಇಮಾಮ್ ನಗರ 30 ವರ್ಷದ ಮಹಿಳೆ ಮೃತಪಟ್ಟಿದ್ದಾರೆ.



