ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಜಿಲ್ಲಾಧಿಕಾರಿಯಲ್ಲಿ11 ಮಂದಿಗೆ ಕೊರೊನಾ ಪಾಸಿಟವ್ ಬಂದಿದ್ದು, ಇಂದು ಕಚೇರಿ ಸಂಪೂರ್ಣ ಕ್ಲೋಸ್ ಆಗಿರಲಿದೆ .
ಜಿಲ್ಲಾಡಳಿತ ಎಲ್ಲ ಕಚೇರಿಗಳಿಗೆ ರಾಸಾಯನಿಕ ಸಿಂಪಡಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಇಂದು ಜಿಲ್ಲಾಡಳಿತ ಸಂಪೂರ್ಣವಾಗಿ ಬಂದ್ ಆಗಲಿದೆ. ಕಚೇರಿಯ ಯಾವುದೇ ಕೆಲಸ ಕಾರ್ಯ ನಡೆಯುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿಗೆ ಕೊರೊನಾ ಪಾಸಿಟಿವ್ ಪತ್ತೆಯಾದ ಹಿನ್ನೆಲೆ, ಅವರ ಸಂಪರ್ಕದಲ್ಲಿದ್ದ ಜಿಲ್ಲಾಧಿಕಾರಿಗಳು ಸಹ ಕ್ವಾರಂಟೈನ್ ನಲ್ಲಿದ್ದಾರೆ. ಜಿಲ್ಲೆಯಲ್ಲಿ ಸೋಮವಾರ 223 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 11 ಜನ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯ್ಲಲಿ ಇನ್ನು 1,234 ಸಕ್ರಿಯ ಪ್ರಕರಣಗಳಿವೆ.