ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಇಂದು ದಾಖಲೆಯ ಬರೋಬ್ಬರಿ 389 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 236 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು ಗುಣಮುಖರಾಗಿ ಡಿಸ್ಚಾರ್ಜ್ ಸಂಖ್ಯೆ 6,028 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 8149 ಮಂದಿ ಸೋಂಕಿತರಿದ್ದಾರೆ. ಇಂದು ಕೊರೊನಾದಿಂದ ಒಬ್ಬರು ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 173ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 1948 ಸಕ್ರಿಯ ಪ್ರಕರಣಗಳಿವೆ.
ಇಂದು ದಾವಗೆರೆಯಲ್ಲಿ189, ಹರಿಹರ 91, ಜಗಳೂರು 09, ಚನ್ನಗಿರಿ 30, ಹೊನ್ನಾಳಿ 59 ಹಾಗೂ ಹೊರ ಜಿಲ್ಲೆಯಿಂದ ಬಂದ 11 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ದಾವಣಗೆರೆಯ ವಿಜಯನಗರ ಬಡಾವಣೆಯ 60 ವರ್ಷದ ಮಹಿಳೆ ಕೊರೊನಾದಿಂದ ಮೃತಪಟ್ಟಿದ್ದಾರೆ.



