ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಹೆಚ್ಚಾಗುತ್ತಿರುವುದನ್ನು ತಡೆಯಲು ಜಿಲ್ಲಾಡಳಿತ ಹೊಸದಾಗಿ ಸರ್ವೇ ಆರಂಭಿಸಿದೆ. ಎಲ್ಲಿ ಸಾವಿನ ಪ್ರಕರಣ ದಾಖಲಾಗುತ್ತದ್ದಯೋ ಆ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಟೆಸ್ಟ್ ಮಾಡಲು ತಯಾರಿ ನಡೆಸಿದ್ದೇವೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.
ಕೊರನಾದಿಂದ ಗುಣಮುಖರಾದ ಎಸ್ ಪಿ ಹನುಮಂತರಾಯ ಅವರನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಬಿಳ್ಕೊಟ್ಟ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಸರ್ವೇ, ಟೆಸ್ಟ್ ಮಾಡುವ ಮೂಲಕ ಕೊರೊನಾ ಸಾವಿನ ಸಂಖ್ಯೆಯನ್ನು ತಗ್ಗಿಸುವ ಪ್ರಯತ್ನ ಮಾಡಲಾಗುವುದು.
ಇಂದಿನಿಂದ ಸಾವಿನ ಪ್ರಕರಣ ದಾಖಲಾದ ಪ್ರದೇಶದಲ್ಲಿ ಹೆಚ್ಚಿನ ಸರ್ವೇ ಮಾಡಿಸಿ, ಆ ಪ್ರದೇಶದ ಜನರನ್ನು ಹೆಚ್ಚು ಟೆಸ್ಟ್ ಗೆ ಒಳಪಡಿಸಲಾಗುವುದು. ಇದರಿಂದ ಸೋಂಕಿತರನ್ನು ಬೇಗ ಪತ್ತೆ ಹಚ್ಚಲು ಸಾಧ್ಯವಾಗಲಿದೆ. ಜನರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಲು ತಡವಾಗಿ ಬರುತ್ತಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ.
ಜಿಲ್ಲೆಯಲ್ಲಿ ಶೇ. 0.1 ರಷ್ಟು ಸಾವಿನ ಪ್ರಮಾಣ ಹೆಚ್ಚಿದೆ. ಹೀಗಾಗಿ ಹೆಚ್ಚು ಹೆಚ್ಚು ಟೆಸ್ಟ್ ಮಾಡುವ ಮೂಲಕ ನಿಯಂತ್ರಣಕ್ಕೆ ತರಲಾಗುವುದು. ಮುಂದಿನ ದಿನಗಳಲ್ಲಿ ಕೊರೊನಾ ಸಂಖ್ಯೆ ಹೆಚ್ಚಾದರೂ, ಅದಕ್ಕೆ ಅಗತ್ಯವಾದ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.



