Connect with us

Dvgsuddi Kannada | online news portal | Kannada news online

ದಾವಣಗೆರೆ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಸೋಂಕು ಇಲ್ಲ : ಜಿಲ್ಲಾಧಿಕಾರಿ

ಪ್ರಮುಖ ಸುದ್ದಿ

ದಾವಣಗೆರೆ ಜಿಲ್ಲೆಯಲ್ಲಿ ಯಾವುದೇ ಕೊರೊನಾ ಸೋಂಕು ಇಲ್ಲ : ಜಿಲ್ಲಾಧಿಕಾರಿ

ಡಿವಿಜಿ ಸುದ್ದಿ, ದಾವಣಗೆರೆ: ಭಾರತವೂ ಸೇರಿದಂತೆ 117 ದೇಶಗಳನ್ನು ಬಾಧಿಸಿರುವ ಕೊರೊನಾ ವೈರಸ್ ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ(PHEIC) ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದೆ. ಜಿಲ್ಲೆಯಲ್ಲಿ ಈ ದಿನದವರೆಗೆ ಯಾವುದೇ ಕೊರೊನಾ ವೈರಸ್ ಸೋಂಕು ಪ್ರಕರಣ ವರದಿಯಾಗಿಲ್ಲ. ಮಾರ್ಚ್ 04 ರಿಂದ ಇದುವರೆಗೆ 137 ಜನರು ಜಿಲ್ಲೆಯಿಂದ ವಿದೇಶ ಪ್ರಯಾಣ ಮಾಡಿ ಬಂದಿದ್ದು, ಅವರನ್ನು ತಪಾಸಣೆಗೆ ಒಳಪಡಿಸಿದ್ದು ಯಾವುದೇ  ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ .

ಒಬ್ಬರು 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಹಾಗೂ 16 ಜನರು 14 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದ್ದಾರೆ. ಒಟ್ಟು 127 ಜನರನ್ನು ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಲ್ಪಟ್ಟಿದ್ದು, 08 ಜನರನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗಿದೆ.
ಹೊರದೇಶಗಳಲ್ಲಿ ಶಾಶ್ವತವಾಗಿ ನೆಲೆಸಿರುವ ವಿದೇಶಿಗರು ಜಿಲ್ಲೆಗೆ ಬಂದು ಮತ್ತೆ ಹೊರದೇಶಗಳಿಗೆ ಇದುವರೆಗೆ 05 ಜನರು ತೆರಳಿದ್ದಾರೆ. ವಿದೇಶಗಳಿಗೆ ಭೇಟಿ ನೀಡಿ ನಮ್ಮ ಜಿಲ್ಲೆಗೆ ಬಂದು ಇತರೆ ಜಿಲ್ಲೆಗಳಿಗೆ ಇದುವರೆಗೆ 07 ಜನ ತೆರಳಿರುತ್ತಾರೆ. ಕೊರೋನಾ ವೈರಸ್ ಪರೀಕ್ಷೆಗಾಗಿ 12 ಮಾದರಿಗಳನ್ನು ಇದುವರೆಗೆ ಕಳುಹಿಸಲಾಗಿದ್ದು, 06 ಮಾದರಿಗಳು ನೆಗೆಟಿವ್ ಎಂದು ಫಲಿತಾಂಶ ಬಂದಿರುತ್ತದೆ. ಇದುವರೆಗೆ ಯಾವುದೇ ಖಚಿತಪಟ್ಟ ಪ್ರಕರಣಗಳು ಇರುವುದಿಲ್ಲ.

ಸಾರ್ವಜನಿಕರಿಗೆ ಮನವಿ: ಕೊವಿಡ್-19 ಪೀಡಿತ ಪ್ರದೇಶಗಳಿಂದ ಹಿಂತಿರುಗಿರುವ ಅಥವಾ ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿರುವ ಯಾರಾದರೂ ಭಾರತಕ್ಕೆ ಹಿಂತಿರುಗಿದ ದಿನದಿಂದ 14 ದಿನಗಳವರೆಗೆ, ರೋಗ ಲಕ್ಷಣಗಳು ಇರಲಿ ಅಥವಾ ಇಲ್ಲದಿರಲಿ ಮನೆಯಲ್ಲಿ ಪ್ರತ್ಯೇಕವಾಗಿರುವುದು. ಹಾಗೂ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ವರದಿ ಮಾಡಿಕೊಳ್ಳಬೇಕು. ಅಥವಾ 104 ಸಹಾಯವಾಣಿಗೆ ಕರೆ ಮಾಡುವುದು. ವೈಯುಕ್ತಿಕ ಸ್ವಚ್ಚತೆಯನ್ನು ಕಾಪಾಡಿಕೊಳ್ಳುವುದು.

ಕೆಮ್ಮುವಾಗ ಅಥವಾ ಸೀನುವಾಗ ಕರವಸ್ತ್ರ/ಟಿಶ್ಯೂ ಪೇಪರನ್ನು ಬಳಸಿ, ಕೈ ಸಚ್ಚಗೊಳಿಸುವ ದ್ರಾವಣ ಅಥವಾ ನೀರು ಮತ್ತು ಸೋಪು ಬಳಸಿ ಆಗಾಗ ಕೈಗಳನ್ನು ತೊಳೆದುಕೊಳ್ಳಬೇಕು ಮತ್ತು ಸಾಮಾಜಿಕ ಸಮೂಹ ಗುಂಪು ಸೇರುವಿಕೆಯನ್ನು ಮಾಡಬಾರದು.
ಎಲ್ಲಾ ರೀತಿಯ ಮಾರ್ಗಸೂಚಿಗಳು ಮತ್ತು ಸಲಹೆಗಳು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಜಾಲತಾಣದಲ್ಲಿ ಲಭ್ಯವಿದ್ದು, ಜಾಲತಾಣದ ವಿಳಾಸ https://karunadu.karnataka.gov.in/…/kan…/pages/nCov-iec.aspx ಇಲ್ಲಿ ಪಡೆಯ ಬಹುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top