ಡಿವಿಜಿ ಸುದ್ದಿ, ದಾವಣಗೆರೆ: ಕಳೆದ 28 ದಿನಗಳಿಂದ ಯಾವುದೇ ಹೊಸ ಪ್ರಕರಣ ಪತ್ತೆಯಾಗದ ಹಿನ್ನೆಲೆ ದಾವಣಗೆರೆ ಜಿಲ್ಲೆ ಗ್ರೀನ್ ಝೋನ್ ಗೆ ಸೇರ್ಪಡೆಗೊಂಡಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಇಂದು ಹೊಸದಾಗಿ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ದಾವಣಗೆರೆ ಆರೆಂಜ್ ಝೋನ್ ನಿಂದ ಗ್ರೀನ್ ಝೋನ್ ಗೆ ಬಂದಿದೆ. ಕಳೆದ 28 ದಿನಗಳಿಂದ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಗ್ರೀನ್ ಝೋನ್ ಗೆ ದಾವಣಗೆರೆ ಸೇರಿದೆ.

ಕಳೆದ 28 ದಿನಗಳ ಹಿಂದೆ ಜಿಲ್ಲೆಯಲ್ಲಿ 3 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದವು. ಆ ಮೂರು ಪ್ರಕರಣಗಳು ಈಗ ಗುಣಮುಖರಾಗಿದ್ದು, ಕೊನೆಯ ಪಾಸಿಟಿವ್ ಪ್ರಕರಣ ಪತ್ತೆಯಾದ ದಿನದಿಂದ 28 ದಿನದ ವರೆಗೆ ಯಾವುದೇ ಪ್ರಕರಣ ಪತ್ತೆಯಾಗದ ಹಿನ್ನೆಲೆ ದಾವಣಗೆರೆ ಗ್ರೀನ್ ಝೋನ್ ಗೆ ಬಂದಿದೆ.
ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸತತ ಪ್ರಯತ್ನದ ಫಲವಾಗಿ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಂದಿದ್ದು, ಗ್ರೀನ್ ಝೋನ್ ಪಡೆದಂತಾಗಿದೆ. ಮೇ. 3 ವರೆಗೆ ಇಡೀ ದೇಶದಾದ್ಯಂತ ಲಾಕ್ ಡೌನ್ ಇದ್ದು, ಜಿಲ್ಲೆಯಲ್ಲಿಯೂ ಲಾಕ್ ಡೌನ್ ಮುಂದುವರಿಯಲಿದೆ. ಇನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫೆರನ್ಸ್ ನಡೆಸಿದ್ದು, ಹೆಚ್ಚಿನ ಮುಖ್ಯಮಂತ್ರಿಗಳು ಲಾಕ್ ಡೌನ್ ಮುಂದುವರಿಸುವಂತೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.




