ಡಿವಿಜಿ ಸುದ್ದಿ, ನ್ಯಾಮತಿ: ತಾಲೂಕಿನ ಆರುಂಡಿ ಗ್ರಾಮದಲ್ಲಿ ಕೊರೊನಾದಿಂದ ಮೃತಪಟ್ಟ ಕುಟುಂಬಕ್ಕೆ ಸಿಎಂ ರಾಜಕೀಯ ಎಂ.ಪಿ. ಕಾರ್ಯದರ್ಶಿ ರೇಣುಕಾಚಾರ್ಯ ಸಾಂತ್ವಾನ ಹೇಳಿ, ಕಂಟೈನ್‌ಮೆಂಟ್ ಝೋನ್ ನ 22 ಕುಟುಂಬಕ್ಕೆ ಆಹಾರದ ಕಿಟ್ ವಿತರಿಸಿದರು.
ಅವಳಿ ತಾಲೂಕಿನಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿದ್ದು ಈಗಾಗಲೇ 12 ಜನರು ಸಾವನ್ನಪ್ಪಿದ್ದು, 518 ಪಾಸಿಟಿವ್ ಪ್ರಕರಣಗಳಿದ್ದು ಆತಂಕ ಮೂಡಿಸಿದೆ. ಎಲ್ಲರು ಕಡ್ಡಾಯವಾಗಿ ಸರ್ಕಾರದ ನಿಯಮ ಪಾಲಿಸುವಂತೆ ಮನವಿ ಮಾಡಿ ಮಾತನಾಡಿದರು.
ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯರಾದ ಉಮಾ ರಮೇಶ್, ತಾಲೂಕು ಪಂಚಾಯಿತಿ ಅಧ್ಯಕ್ಷ ಎಸ್.ಪಿ.ರವಿಕುಮಾರ್, ಉಪಾಧ್ಯಕ್ಷ ಮರಿಕಣ್ಣಪ್ಪ, ತಾಲೂಕು ಬಿಜೆಪಿ ಅಧ್ಯಕ್ಷ ಜೆ.ಕೆ.ಸುರೇಶ್, ಅಜಯ್ ರೆಡ್ಡಿ ಸೇರದಿಂತೆ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.



