Connect with us

Dvg Suddi-Kannada News

ದಾವಣಗೆರೆಯ ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಲ್ಲಿ ಹೋಟೆಲ್ ತೆರೆಯಲು ಅನುಮತಿ

ಪ್ರಮುಖ ಸುದ್ದಿ

ದಾವಣಗೆರೆಯ ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಲ್ಲಿ ಹೋಟೆಲ್ ತೆರೆಯಲು ಅನುಮತಿ

ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ‌ ವೈರಸ್ ಸಾಂಕ್ರಾಮಿಕ ರೋಗ ಹರಡದಂತೆ ತಡೆಯಲು ದೇಶದಾದ್ಯಂತ ಲಾಕ್ ಡೌನ್ ಮಾಡಲಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅವಶ್ಯಕ ಸಾಮಗ್ರಿಗಳನ್ನು ತಲುಪಿಸಲು ಅನುಕೂಲವಾಗುವಂತೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಇದೀಗ ರಾಜ್ಯ , ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಟೆಲ್ ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚಿಸಿದ್ದಾರೆ.

ವಾಹನ ಚಾಲಕರಿಗೆ ಮತ್ತು ಅವರ ಸಹಾಯಕರಿಗೆ ಊಟೋಪಚಾರಕ್ಕಾಗಿ ದಾವಣಗೆರೆ ಜಿಲ್ಲೆಯಲ್ಲಿನ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಹೋಟೆಲ್ ಮತ್ತು ಡಾಬಾಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಗ್ರೀನ್ ಪಾಯಿಂಟ್ ಪಂಜಾಬಿ ಡಾಬಾ, ಶಾಂತಿಸಾಗರ ಡಾಬಾ, ಬಸವೇಶ್ವರ ಹೋಟೆಲ್, ಪೃಥ್ವಿ ಡಾಬಾ , ಸಂಜನ ಹೋಟೆಲ್, ಮಲ್ನಾಡುಸಿರಿ ಫ್ಯಾಮಿಲಿ ರೆಸ್ಟೋರೆಂಟ್ ದುದುರಕಟ್ಟೆ, ಬಿಂದಾಸ್ ಡಾಬಾ ಆನಗೋಡು ಹತ್ತಿರ, ಕಿರಣ್ ರೆಡ್ಡಿ ಫ್ಯಾಮಿಲಿ ರೆಸ್ಟೋರೆಂಟ್ ದೊಣ್ಣೇಹಳ್ಳಿ ಹತ್ತಿರ, ಸಾಗರ ಸಕಾರ ಡಾಬಾ ಹನಗವಾಡಿ ಕ್ರಾಸ್ ಹತ್ತಿರ, ಅಮೃತ ಹೋಟೆಲ್ ಹದಡಿ ಗ್ರಾಮ, ಮರಿಯಮ್ಮನದೇವಿ ಖಾನವಳಿ ಹಿರೇಮಳಲಿ ರಸ್ತೆ ನಲ್ಲೂರು, ಬಸವೇಶ್ವರ ಹೋಟೆಲ್ ತ್ಯಾವಣಿಗೆ, ಸಂತೋಷ್ ಫ್ಯಾಮಿಲಿ ರೆಸ್ಟೋರೆಂಟ್ ದೇವನಾಯಕನಹಳ್ಳಿ, ಹೊನ್ನಾಳಿ, ಹೊಯ್ಸಳ ಡಾಬಾ ಸುರಹೊನ್ನೆ ನ್ಯಾಮತಿ, ಈಟರ್ಸ್ ಫ್ಯಾಮಿಲಿ ರೆಸ್ಟೋರೆಂಟ್ ಗೊಲ್ಲರಹಳ್ಳಿ, ಈ ಹೋಟೆಲ್‍ಗಳಿಗೆ ಮಾತ್ರ ಅನುಮತಿಯನ್ನು ನೀಡಲಾಗಿದೆ.
ಹೋಟೆಲ್ ಮಾಲೀಕರಿಗೆ ಕೆಲ ಷರತ್ತುಗಳು ಮತ್ತು ನಿಯಮಗಳನ್ನು ಸೂಚಿಸಲಾಗಿದೆ. ಗ್ರಾಹಕರೊಂದಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳತಕ್ಕದು, ಪರಿಶುದ್ದತೆ, ನೈರ್ಮಲ್ಯ, ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಮತ್ತು ಸ್ತಾನಿಟೈಜರ್ ಬಳಕೆ ಕಡ್ಡಾಯವಾಗಿರುತ್ತದೆ ಮತ್ತು ಕೆಲಸ ನಿರ್ವಹಿಸುವವರೆಲ್ಲರು ಕಡ್ಡಾಯವಾಗಿ ಮಾಸ್ಕ್‍ಗಳನ್ನು ಧರಿಸಕ್ಕದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳತಕ್ಕದ್ದು. ಮಾಲೀಕರುಗಳು ಸೇರಿದಂತೆ ಕೆಲಸಗಾರರಿಗೆ ಕೆಮ್ಮು, ಶೀತ, ಜ್ವರದ ಲಕ್ಷಣ ಕಂಡುಬಂದಲ್ಲಿ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸಬೇಕು. ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಬೇಕು. ಶೌಚಾಲಯಗಳಲ್ಲಿ ಸ್ಯಾನಿಟೈಸರ್ , ಸೋಪ್ ವ್ಯವಸ್ಥೆ ಮಾಡಬೇಕು. ಊಟ/ಉಪಾಹಾರಗಳನ್ನು ಗ್ರಾಹಕರಿಗೆ ಪಾರ್ಸಲ್ ಮೂಲಕ ಮಾತ್ರ ಮಾರಾಟ ಮಾಡುವುದು ಕಡ್ಡಾಯವಾಗಿರುತ್ತದೆ. ಕುಳಿತು ತಿನ್ನುವುದಕ್ಕೆ ಅವಕಾಶವಿರುವುದಿಲ್ಲ.

ಈ ಷರತ್ತುಗಳನ್ನು ಉಲ್ಲಂಘಿಸುವವರ ಮೇಲೆ ಭಾರತೀಯ ದಂಡ ಸಂಹಿತೆಯ ಕಲಂ 188 ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ರವರೆಗೆ ಕಾನೂನುಗಳನ್ವಯ ಕ್ರಮ ಜರುಗಿಸಲಾಗುವುದೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top