ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ಭೀತಿಯಿಂದ ದೇಶದಾದ್ಯಂತ ಲಾಕ್ ಡೌನ್ ಹಿನ್ನೆಲೆ ದಾವಣಗೆರೆಯಲ್ಲಿ ಇಂದಿನಿಂದ ಪೆಟ್ರೋಲ್ ಬಂಕ್ ಬಂದ್ ಆಗಲಿವೆ.
ಅಗತ್ಯ ಸೇವೆ ನೀಡುವವರು, ವೈದ್ಯರು, ಮಾಧ್ಯಮದವರಿಗೆ ಹೊರತು ಪಡಿಸಿ, ಉಳಿದವರಿಗೆ ಪೆಟ್ರೋಲ್ ನೀಡದಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಜಿಲ್ಲಾಡಳಿತ ನೀಡಿರುವ ಪಾಸ್ ತೋರಿಸಿದರೆ ಮಾತ್ರ ಪೆಟ್ರೋಲ್ ನೀಡಲು, ಬಂಕ್ ಮಾಲೀಕರಿಗೆ ಸೂಚಿಸಲಾಗಿದೆ.
ದಾವಣಗೆರೆಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಎರಡು ಪ್ರಕರಣಗಳು ಪತ್ತೆಯಾಗಿರುವುದರಿಂದ ಜಿಲ್ಲಾಡಳಿತ ಜಿಲ್ಲಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಪೆಟ್ರೋಲ್ ಬಂಕ್ ಗಳನ್ನು ಬಂದ್ ಮಾಡುವಂತೆ ಆದೇಶಿಸಿದೆ. ಹೀಗಾಗಿ ಇಂದಿನಿಂದಲ್ಲೇ ಸಾರ್ವಜನಿಕರಿಗೆ ಪೆಟ್ರೋಲ್ ಸಿಗಲ್ಲ.



