Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

ಪ್ರಮುಖ ಸುದ್ದಿ

ದಾವಣಗೆರೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿ

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯಲ್ಲಿ ಕೊರೊನಾ ಸೋಂಕು ಮತ್ತೊಂದು ಬಲಿ ಪಡೆದಿದೆ.  ಇಮಾಂ ನಗರದ ಮಹಿಳೆ (48) ಮೃತಪಟ್ಟಿದ್ದು, ಅವರಿಗೆ ಕೊರೊನಾ ವೈರಸ್‌ ದೃಢಪಟ್ಟಿತ್ತು. ಈ ಸಾವು ದಾವಣಗೆರಯಲ್ಲಿ ಮತ್ತೊಷ್ಟು  ಆತಂಕ ಸೃಷ್ಟಿಸಿದೆ.

ಉಸಿರಾಟದ ತೊಂದರೆ, ರಕ್ತದೊತ್ತಡ, ಮಧುಮೇಹ ದಿಂದ ಬಳಲುತ್ತಿದ್ದು, ಮೇ 1ರಂದು ಜಿಲ್ಲಾ ಚಿಗಟೇರಿ ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ಸೇರಿದ ಮರುದಿನ ಮೃತಪಟ್ಟಿದ್ದರು.ಈ ಮಹಿಳೆಯ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು ಇಂದು ವರದಿ ಬಂದಿದ್ದು,  ಕೊರೊನಾ ವೈರಸ್‌ ಪಾಸಿಟಿವ್  ಖಚಿತಪಟ್ಟಿದೆ. ಜಾಲಿನಗರದ  ಕೊರೊನಾ ಪಾಸಿಟಿವ್ ನರ್ಸ್  ದ್ವಿತೀಯ ಸಂಪರ್ಕ ಮೃತ ಮಹಿಳೆಗೆ ಇರುವುದು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಜಾಲಿನಗರ ವೃದ್ಧಿ ಕೊರೊನಾ ಸೋಂಕಿಗೆ ಮೊದಲ ಬಲಿಯಾಗಿತ್ತು. ಇದೀಗ  ಮಹಿಳೆ ಮೃತಪಟ್ಟಿರುವುದರಿಂದ ಜಿಲ್ಲೆಯಲ್ಲಿ ಎರಡನೇ ಬಲಿ ಇದಾಗಿದೆ. ಜಿಲ್ಲೆಯಲ್ಲಿ 31 ಪ್ರಕರಣದಲ್ಲಿ  ಇಬ್ಬರು ಮೃತಪಟ್ಟಿರುವುದರಿಂದ ಇನ್ನು  29 ಸೋಂಕಿತರಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top