ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಜಿಲ್ಲಾಧಿಕಾರಿ ಸಹಿತ 18 ಜನ ಕ್ವಾರಂಟೈನ್ ಆಗಿದ್ದಾರೆ.
ತುರ್ತು ಸಂದರ್ಭದಲ್ಲಿ ಮಾತ್ರ ಕಚೇರಿಯಲ್ಲಿ ಲಭ್ಯವಿದ್ದು, ಮನೆಯಿಂದಲೇ ಕಾರ್ಯ ನಿರ್ವಹಿಸುವುದಾಗಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ತಿಳಿಸಿದ್ದಾರೆ.



