ಡಿವಿಜಿ ಸುದ್ದಿ, ದಾವಣಗೆರೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಕೆಸಿ ವೇಣುಗೋಪಾಲ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಎಲ್ಲಾ ಜಿಲ್ಲಾ ಅಧ್ಯಕ್ಷರ ಮತ್ತು ಟಾಸ್ಕ್ ಫೋರ್ಸ್ ಮುಖ್ಯಸ್ಥರ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ರವರು ಈ ಸಂದರ್ಭದಲ್ಲಿ ದಾವಣಗೆರೆಯಲ್ಲಿ ಕೊರೊನಾ ವೈರಸ್ ನಿರ್ವಹಣೆಯಲ್ಲಿ ಕಾಂಗ್ರೆಸ್ ಪಕ್ಷ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾದ ಡಿ.ಬಸವರಾಜ್ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್. ಕೆ. ಶೆಟ್ಟಿ ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಸಂಪಣ್ಣ, ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ. ಎಲ್. ಹರೀಶ್ ಬಸಾಪುರ ಉಪಸ್ಥಿತರಿದ್ದರು.