ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಸತತ ನಾಲ್ಕು ದಿನಗಳಿಂದ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರಿದಿದ್ದು, ಇಂದು ಕೂಡ 77 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ . ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1255ಕ್ಕೆ ಏರಿಕೆಯಾಗಿದೆ.
ಕಳೆದ ಮಂಗಳವಾರ 95, ಬುಧವಾರ 96 ಹಾಗೂ ಗುರುವಾರ 107 ಕೊರೊನಾ ಪಾಸಿಟಿವ್ ಪ್ರಕಣಗಳು ಪತ್ತೆಯಾಗಿದ್ದವು. ಇಂದು 77 ಪ್ರಕರಣಗಳು ಪತ್ತೆಯಾಗುವ ಮೂಲಕ ಜಿಲ್ಲೆಯಲ್ಲಿ ಸೋಂಕಿತ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಸಾಗಿದೆ ಹೊರತು ನಿಯಂತ್ರಣಕ್ಕೆ ಬರುತ್ತಿಲ್ಲ. ಅದರಲ್ಲೂ ದಾವಣಗೆರೆ ನಗರ ಪ್ರದೇಶದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿದೆ.
ಇಂದು ಸಮಾಧಾನಕರ ಸಂಗತಿ ಏನಾಂದ್ರೆ, 84 ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ಒಟ್ಟು 1255 ಸೋಂಕಿತ ಪ್ರಕರಣಗಳಲ್ಲಿ 751 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೂಡ ಇಬ್ಬರು ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನು 472 ಕೊರೊನಾ ಪಾಸಿಟಿವ್ ಪ್ರಕರಣಗಳು ಸಕ್ರಿಯವಾಗಿವೆ.
ಇಂದು ಪತ್ತೆಯಾದ 77 ಪಾಸಿಟಿವ್ ಪ್ರಕರಣಗಳಲ್ಲಿ ದಾವಣಗೆರೆಯಲ್ಲಿ ಅಧಿಕ 47, ಹರಿಹರ 16, ಜಗಳೂರು 06, ಚನ್ನಗಿರಿ 05, ಹೊರ ಜಿಲ್ಲೆಯ 03 ಪ್ರಕರಣಗಳು ಪತ್ತೆಯಾಗಿವೆ. ಹಾವೇರಿ ಜಿಲ್ಲೆಯ 21 ವರ್ಷದ ಯುವಕ ಹಾಗೂ ಮಲೇಬೆನ್ನೂರಿನ 55 ವರ್ಷದ ಪುರುಷ ಸಾವನ್ನಪ್ಪಿದ್ದಾರೆ.



