ಡಿವಿಜಿ ಸುದ್ದಿ, ಜಗಳೂರು: ತಾಲ್ಲೂಕಿನಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಅಧಿಕಾರಿಗಳು ಸಮರ್ಪಣಾ ಮನೋಭಾವದಿಂದ ಕೆಲಸ ಮಾಡಬೇಕಿದೆ. ಈ ಬಗ್ಗೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು.
ಪಟ್ಟಣದಲ್ಲಿ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಅರಸೀಕೆರೆ ಪೊಲೀಸ್ ಪೇದೆ, ಪೌರಕಾರ್ಮಿಕ, 11ವರ್ಷದ ಬಾಲಕಿ ಸೇರಿ ನಾಲ್ಕು ಜನರಿಗೆ ಕೊರೊನಾ ಪತ್ತೆಯಾಗಿದೆ. ಪೌರ ಕಾರ್ಮಿಕನ ಸಂಪರ್ಕಕ್ಕೆ ಬಂದ 5 ಜನರನ್ನು ಕ್ವಾರಂಟೈನ್ ಮಾಡಲಾಗಿದೆ ಎಂದರು.
ಕೊರೊನಾ ಶಂಕಿತರನ್ನು ಖಾಸಗಿ ಆಸ್ಪತ್ರೆಯಲ್ಲಿ ಪರೀಕ್ಷೆ ಒಳಪಡಿಸಲಾಗಿದೆ. ಅಗತ್ಯವಿದ್ದಲ್ಲಿ ದಾವಣಗೆರೆ ಜಿಲ್ಲಾಸ್ಪತ್ರಗೆ ದಾಖಲಿಸಲಾಗುವುದು. ಅಧಿಕಾರಿಗಳು, ಆರೋಗ್ಯ ಸಿಬ್ಬಂದಿಗೆ ಅಗತ್ಯವಾದ ಪಿಪಿಇ ಕಿಟ್ ನೀಡಲು ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು. ಈಗಾಗಲೇ 3 ಕಡೆ ಸೀಲ್ ಡೌನ್ ಮಾಡಲಾಗಿದೆ. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.



