ಡಿವಿಜಿ ಸುದ್ದಿ, ದಾವಣಗೆರೆ: ಮನೆ ಮುಂದೆ ಕಸಗುಡಿಸುತ್ತಿದ್ದ ಮಹಿಳೆಯ ಕೊರಳಿನಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ನಗರದ ದೇವರಾಜು ಅರಸು ಬಡಾವಣೆಯ ಸಿ ಬ್ಲಾಕ್ ನಿವಾಸಿ ಚಂದ್ರಮ್ಮ ಅವರ ಸರ ಕಳ್ಳತನವಾಗಿದೆ. ಬೆಳಗ್ಗೆ ಮನೆ ಮುಂದೆ ಕಸಗುಡಿಸುವಾಗ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬಂದ ವ್ಯಕ್ತಿಯೊಬ್ಬ 35 ಗ್ರಾಂನ 1.06 ಲಕ್ಷ ಮೌಲ್ಯದ ಮಾಂಗಲ್ಯ ಸರ ಕಿತ್ತುಕೊಂಡು ಓಡಿ ಹೋಗಿದ್ದಾನೆ.
ನೀಲಿ ಬಣ್ಣದ ಶರ್ಟ್ , ಬಿಳಿ ಬಣ್ಣದ ಮಾಸ್ಕ್ ಹಾಕಿಕೊಂಡು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಮಾಂಗಲ್ಯ ಸರ ಕಿತ್ತುಕೊಂಡು ಹೋಗಿದ್ದಾನೆ.



