ಡಿವಿಜಿ ಸುದ್ದಿ, ದಾವಣಗೆರೆ: ಅಯೋಧ್ಯೆಯಲ್ಲಿ ಆ.05 ರಂದು ರಾಮ ಮಂದಿರ ಭೂಮಿ ಪೂಜೆ ನಡೆಯಲಿದೆ. ಈ ಕಾರ್ಯಕ್ರಮ ಯಶಸ್ವಿಗಾಗಿ ನಗರದ ಪಿ.ಜೆ ಬಡಾವಣೆಯಲ್ಲಿರುವ ಶ್ರೀ ರಾಮಮಂದಿರದಲ್ಲಿ ಬೆಳಗ್ಗೆ 8 ಗಂಟೆಗೆ ವಿಶೇಷ ಅಭಿಷೇಕ ಹಮ್ಮಿಕೊಳ್ಳಲಾಗಿದೆ.ಈ ವೇಳೆ ರಾಮ ಭಕ್ತರು, ಹಿಂದೂ ಸಂಘಟನೆಯಿಂದ ಶ್ರೀ ರಾಮ ಮೂರ್ತಿಗೆ ಅಭಿಷೇಕ ನೆರವೇರಿಸಲಾಗುವುದು ಎಂದು ಹಿಂದೂ ಪರ ಸಂಘಟನೆ ಮುಖಂಡ ಯಶವಂತರಾವ್ ಜಾಧವ್ ಹೇಳಿದರು
.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಮಿ ಪೂಜೆಗೆ ಯಾವುದೇ ವಿಘ್ನ ಎದುರಾಗದಂತೆ ಅಭಿಷೇಕ ನಡೆಸಲಾಗುವುದು. ಇದೇ ವೇಳೆ ನಾಡಿಗೆ ಸೇವೆ ಸಲ್ಲಿಸಿದ ಜಗಜ್ಯೋತಿ ಬಸವಣ್ಣ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ಸಂಗೊಳ್ಳಿರಾಯಣ್ಣ , ಮದಕರಿ ನಾಯಕ ಹಾಗೂ ಛತ್ರಪತಿ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಶ್ರೀ ರಾಮಮೂರ್ತಿಗೆ ಪೂಜೆ ಸಲ್ಲಿಸಿ ಸಿಹಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶ್ರೀನಿವಾಸ್ ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಪಿಸಿ ಮಹಾಬಲೇಶ್ , ಆನಂದರಾವ್ ಶಿಂಧೆ, ಶಿವಪ್ರಕಾಶ್ , ರಾಜು ಉಪಸ್ಥಿತರಿದ್ದರು.