Connect with us

Dvg Suddi-Kannada News

ದಾವಣಗೆರೆಯಲ್ಲಿ ಇನ್ನು 290 ಸ್ಯಾಂಪಲ್ ವರದಿಗೆ ಎದುರು ನೋಡುತ್ತಿದ್ದೇವೆ : ಜಿಲ್ಲಾಧಿಕಾರಿ

ಪ್ರಮುಖ ಸುದ್ದಿ

ದಾವಣಗೆರೆಯಲ್ಲಿ ಇನ್ನು 290 ಸ್ಯಾಂಪಲ್ ವರದಿಗೆ ಎದುರು ನೋಡುತ್ತಿದ್ದೇವೆ : ಜಿಲ್ಲಾಧಿಕಾರಿ

ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ಸೋಂಕು ನಿಯಂತ್ರಣದ ವಿರುದ್ಧದ ಹೋರಾಟ ಒಂದು ಯುದ್ಧ ರೀತಿಯದ್ದಾಗಿದೆ ಎಂದು ಜಿಲ್ಲಾದಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಇಂತಹ ತುರ್ತು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ತಮ್ಮ ಕುಟುಂಬ ಮರೆತು, ವೈಯಕ್ತಿಕ ಜೀವನ ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದೇವೆ.  ಇನ್ನೇನು ಎಲ್ಲಾ ಮುಗಿತು. 28 ದಿನದಿಂದ ಒಂದು ಪಾಸಿಟಿವ್ ಕೇಸ್ ಇಲ್ಲ ಎಂದು ಗ್ರೀನ್ ಜೋನ್ ಘೋಷಣೆ ಮಾಡಲಾಯಿತು. ಅಷ್ಟರಲ್ಲಿ ಮರು ದಿನವೇ ಕೊರೊನಾ ಪಾಸಿಟಿವ್ 2 ಪ್ರಕರಣಗಳು ಕಂಡುಬಂದವು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೋಟೆಲ್ ಮತ್ತು ಲಾಡ್ಜ್ ಮಾಲೀಕರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ  ಎರಡು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ 27  ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಇನ್ನೂ ಸುಮಾರು 290 ಸ್ಯಾಂಪಲ್‍ಗಳ ವರದಿ ಬಾಕಿ ಇದ್ದು, ವರದಿಗಾಗಿ ಎದುರು ನೋಡಲಾಗುತ್ತಿದೆ ಎಂದು ತಿಳಿಸಿದರು.

ಜೊತೆಗೆ ಪಾಸಿಟಿವ್ ಪ್ರಕರಣಕ್ಕೆ ಸಂಬಂಧಪಟ್ಟವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ನಜ್ಮಾ, ಜಿಲ್ಲಾ ಹೋಟೆಲ್ ಸಂಘದ ಪದಾಧಿಕಾರಿಗಳು ಇದ್ದರು.

 

 

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top