ನಾಳೆಯಿಂದ ಹೊಟೇಲ್ ಕಾರ್ಯಾರಂಭ, ವಲಸಿಗರು ಇರುವಲ್ಲಿಯೇ ಪಡಿತರ: ಜಿಲ್ಲಾಧಿಕಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಇಡೀ ದೇಶ ಲಾಕ್‍ಡೌನ್‍ ಆಗಿದೆ. ನೆರೆ ಜಿಲ್ಲೆಗಳ ಹಾಗೂ ನೆರೆ ರಾಜ್ಯಗಳಿಂದ ಬಂದ ವಲಸಿಗರಿಗೆ ಅವರು ಇರುವ ಬಳಿಯೇ ಪಡಿತರ ವಿತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಜಿಲ್ಲಾಡಳಿತದ ಭವನದ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ನಿರಾಶ್ರಿತರು ಹಸಿವಿನಿಂದ ಬಳಲಬಾರದು. ವಿವಿಧ ರಾಜ್ಯಗಳ ಕಾರ್ಮಿಕರು, ಅಲೆಮಾರಿ ಜನಾಂಗದವರು, ಅವರು ಇರುವಲ್ಲಿಗೆ ಅಧಿಕಾರಿಗಳು ತೆರಳಿ ತಯಾರಿಸಿದ ಆಹಾರ ಅಥವಾ ಪಡಿತರ ಒದಗಿಸುವ ಮೂಲಕ ಅವರಿಗೆ ನೆರವು ನೀಡಬೇಕೆಂದರು.

ಹೊಟೇಲ್ ತೆರೆಯಲು ಜಿಲ್ಲಾಧಿಕಾರಿ ಸೂಚನೆ : ಕೊರೊನಾ ವೈರಸ್ ಹಿನ್ನೆಲೆ ಲಾಕ್‍ಡೌನ್ ಇದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಹೊಟೇಲ್ಗಳನ್ನು ಮಾಡಬೇಕು.ಪ್ರಮುಖವಾಗಿ ನೂತನ್ ಕಾಲೇಜು ರಸ್ತೆಯ ಸವಿತಾ ಹೊಟೇಲ್, ವಿದ್ಯಾನಗರದ ಸಿಗಂಧೂರೇಶ್ವರಿ ಹೊಟೇಲ್, ಅಜ್ಜಿ ಹೊಟೇಲ್ ಖಾನಾವಳಿ, ಆಂಜನೇಯ ಬಡಾವಣೆಯ ಬಿಐಇಟಿ ರಸ್ತೆಯ ಮಮತಾ ಹೊಟೇಲ್, ಹದಡಿ ರಸ್ತೆಯ ಶಿವಸಾಗರ್ ಹೋಟೆಲ್‍ಗಳನ್ನು ಏ.1 ರಿಂದಲೇ ತೆರೆಯಬೇಕು. ಉಳಿದ ಹೊಟೇಲ್ ಗಳು ಕೂಡಲೇ ತೆರೆಯಬೇಕೆಂದರು.

ಲೈಂಗಿಕ ಕಾರ್ಯಕರ್ತರು, ಮಂಗಳಮುಖಿಯರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಸಂಬಂಧಿಸಿದ ತಹಶೀಲ್ದಾರರು ವರದಿ ಪಡೆದು ಅವರಿಗೆ ಅಗತ್ಯ ಪಡಿತರ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು. ಜಿಲ್ಲೆಯಲ್ಲಿ 156 ಸಫಾಯಿ ಕರ್ಮಚಾರಿ ಕುಟುಂಬಗಳಿದ್ದು, ಅವರಲ್ಲಿ ಕೆಲವರಿಗೆ ಪಡಿತರ ಚೀಟಿ ಇದೆ. ಒಂದು ವೇಳೆ ಇಲ್ಲದವರಿಗೂ ಅಗತ್ಯ ಪಡಿತರ ನೀಡಿ. ಮತ್ತು ಬೇಕರಿಗಳು ಕಾರ್ಯಾರಂಭವಾಗಿರುವ ಬಗ್ಗೆ ಖಚಿತಪಡಿಸಿ ಎಂದರು.

ಫೆಬ್ರವರಿ, ಮಾರ್ಚ್ ತಿಂಗಳಲ್ಲಿ ದೆಹಲಿಯ ನಿಜಾಮುದ್ದೀನ ಜಮಾತೆ ಇಸ್ಲಾಂ ಧರ್ಮಸಭೆಯಲ್ಲಿ ಹಾಜರಾದ ಐದು ವ್ಯಕ್ತಿಗಳು ನಗರದಲ್ಲಿ ಇದ್ದಾರೆಂಬ ಸುದ್ದಿ ಬಂದಿದ್ದು, ಅವರು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಕ್ಷಣ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಪಡಬೇಕು. ಅಥವಾ ಯಾರಾದರೂ ಅವರ ಅಕ್ಕಪಕ್ಕ ವಾಸಿಸುವವರು ಅಂತಹವರ ಮಾಹಿತಿ ನೀಡಿದರೆ, ಅಂತಹವರ ಮಾಹಿತಿಯನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದರು.

ಬಳ್ಳಾರಿಯ ಹೊಸಪೇಟೆಯ ಕೊರೊನಾ ಪಾಸಿಟಿವ್ ಬಂದಿರುವ ವ್ಯಕ್ತಿ ನಗರದ ಇಎಸ್‍ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಅವರನ್ನು ತಪಾಸಣೆ ನಡೆಸಿದ ವೈದ್ಯರನ್ನು ಹೋಮ್ ಕ್ವಾರೆಂಟೈನ್‍ನಲ್ಲಿ ಇಡಲಾಗಿದೆ. ಅವರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ ಎಂದರು.

ಲಾಕ್‍ಡೌನ್ ಹಿನ್ನೆಲೆಯಲ್ಲಿ ನಗರದಲ್ಲಿ ಇಂದು ಒಟ್ಟು 78 ವಾಹನಗಳನ್ನು ಸೀಜ್ ಮಾಡಲಾಗಿದ್ದು, ದಯಮಾಡಿ ಸಾರ್ವಜನಿಕರು ಮನೆಯಿಂದ ಹೊರ ಹೋಗಲು ಕಾರಣ ಬೇಡ. ಮನೆಯಲ್ಲಿರಲು ಹಲವಾರು ಕಾರಣಗಳಿವೆ . ಈ ಕುರಿತು ಜನಪ್ರತಿನಿಧಿಗಳು ಸಾರ್ವಜನಿಕರಲ್ಲಿ ಮನವಿ ಮಾಡಬೇಕು ಹಾಗೂ ವಿವಿಧ ಧರ್ಮಗುರುಗಳು, ಸಮಾಜದ ಮುಖಂಡರು ತಿಳಿ ಹೇಳಬೇಕು.ಮಕ್ಕಳಿಗೆ ಮತ್ತು ಗರ್ಭಿಣಿ, ಬಾಣಂತಿಯರಿಗೆ ಮೊಟ್ಟೆಗಳನ್ನು ನೀಡಬೇಕು ಎಂದು ತಿಳಿಸಿದರು.

ಆಹಾರ ಇಲಾಖೆಯ ಉಪ ನಿರ್ದೇಶಕ ಮಂಟೇಸ್ವಾಮಿ ಮಾತನಾಡಿ, ಜಿಲ್ಲೆಯ ರೈಸ್‍ಮಿಲ್‍ಗಳು, ದಾಲ್‍ಮಿಲ್‍ಗಳು ಕಾರ್ಯಾರಂಭ ಮಾಡಿದ್ದು, ಪೂರಕ ಸಾಮಗ್ರಿಗಳು ದೊರೆಯುತ್ತಿವೆ ಎಂದು ಮಾಲೀಕರು ತಿಳಿಸಿದ್ದಾರೆ ಎಂದರು.

ಸಭೆಯಲ್ಲಿ ದಾವಣಗೆರೆ ಸಿಇಒ  ಪದ್ಮಾ ಬಸವಂತಪ್ಪ, ಎಡಿಸಿ ಪೂಜಾರ ವೀರಮಲ್ಲಪ್ಪ, ಸ್ಮಾರ್ಟ್‍ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಪಾಲಿಕೆ ಆಯುಕ್ತರಾದ ವಿಶ್ವನಾಥ ಮುದಜ್ಜಿ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *