ಡಿವಿಜಿ ಸುದ್ದಿ, ದಾವಣಗೆರೆ: ನಗರದ ಪಿ.ಬಿ. ರಸ್ತೆಯ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಬಿ.ಪಿ ಲಿಂಗೇಶ್ ವಿರುದ್ಧ ಸಾರ್ವಜನಿಕರ ನೀಡಿದ ದೂರಿನನ್ವಯ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಸೇವೆಯಿಂದ ವಜಾ ಮಾಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ದೇವಸ್ಥಾನಕ್ಕೆ ಬರುವ ಭಕ್ತಾದಿಗಳೊಂದಿಗೆ ಅಸಭ್ಯವಾಗಿ ವರ್ತಿಸಿರುವ ಕುರಿತು ದೂರು ನೀಡಲಾಗಿತ್ತು. ಮುಜರಾಯಿ ಅರ್ಚಕರಾಗಿದ್ದರೂ ಸಹ ಮೇಲಾಧಿಕಾರಿಗಳ ಅನುಮತಿ ಇಲ್ಲದೇ ದೇವಸ್ಥಾನಕ್ಕೆ ಸಂಬಂಧಿಸಿದ ಆಸ್ತಿಯ ಕುರಿತು ಪ್ರತಿಕಾ ಪ್ರಕಟಣೆ ಹೊರಡಿಸಿದ್ದಾರೆ. ಇದಲ್ಲದೆ ದೇವಸ್ಥಾನದ ಪೂಜಾ ಕೈಂಕರ್ಯಗಳನ್ನು ನಿಗದಿತ ಅವಧಿಯಲ್ಲಿ ನೇರವೇರಿಸದೆ ಇರುವುದರಿಂದ ದೇವಸ್ಥಾನಕ್ಕೆ ಬರುವ ಆದಾಯದಲ್ಲಿ ಕುಂಠಿತವಾಗುವಂತೆ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯಿ ದತ್ತಿಗಳ ನಿಯಾಮಾವಳಿಗಳು 2002ರ ಕಲಂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಅರ್ಚಕ ಬಿ.ಪಿ ಲಿಂಗೇಶ ಅವರನ್ನು ಸೇವೆಯಿಂದ ವಜಾ ಮಾಡಿದ್ದಾರೆ. ಕೊಡಲೇ ದೇವಸ್ಥಾನದ ಬೀಗ ಹಾಗೂ ಇತರೆ ಎಲ್ಲಾ ದಾಖಲೆಗಳನ್ನು, ಒಡವೆ ಹಾಗೂ ವಸ್ತ್ರಗಳನ್ನು ತಹಶೀಲ್ದಾರ್ ಅವರ ಸುರ್ಪರ್ದಿಗೆ ನೀಡಲು ಆದೇಶ ಹೊರಡಿಸಿದ್ದಾರೆ.