ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ಭೀತಿ ಹಿನ್ನೆಲೆ ಸಬ್ ರಿಜಿಸ್ಟ್ರಾರ್ ಆಫೀಸ್ ನಲ್ಲಿ ಜನದಟ್ಟಣಿ ಇದೆ ಎಂಬ ಮಾಹಿತಿ ಮೇರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಬ್ ರಿಜಿಸ್ಟ್ರಾರ್ ಗಳು ಕಚೇರಿಯಲ್ಲಿ ಇಲ್ಲದ ಹಿನ್ನೆಲೆ, ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ದಾವಣಗೆರೆ ನಗರದ ಸಬ್ ರಿಜಿಸ್ಟ್ರಾರ್ ಕಚೇರಿಗೆ ದಿಢೀರ್ ಭೇಟಿ ನೀಡಿದ ಸಮಯದಲ್ಲಿ ಕಚೇರಿಯಲ್ಲಿ ಭಾರೀ ಜನಸಂದಣಿ ಇತ್ತು. ಆದರೆ, ಸಬ್ ರಿಜಿಸ್ಟ್ರಾರ್‍ಗಳಾದ ಬಾಲಕೃಷ್ಣ ಮತ್ತು ಸುಬ್ರಹ್ಮಣ್ಯ ಇವರಿಬ್ಬರೂ ಕಚೇರಿಗೆ ಹಾಜರಾಗಿರಲಿಲ್ಲ.
ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಇಬ್ಬರೂ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಸೂಚನೆ ನೀಡಿದ್ದಾರೆ. ಹಾಗೂ ಅಲ್ಲಿನ ಸಿಬ್ಬಂದಿಗಳಿಗೆ ಜನಸಂದಣಿ ನಿಯಂತ್ರಣ ಹಾಗೂ ಸ್ವಚ್ಚತೆ ಕಾಪಾಡುವಂತೆ ಸೂಚಿಸಿದ್ದಾರೆ.



