ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ತುರ್ತಾಗಿ ಕೊರೊನಾ ಟೆಸ್ಟಿಂಗ್ ಲ್ಯಾಬ್ ಅಗತ್ಯವಾಗಿದೆ. ಇಂದು ಎಸ್ ಎಸ್ ಆಸ್ಪತ್ರೆ ಯಲ್ಲಿ ಕೊರೊನಾ ಟೆಸ್ಟಿಂಗ್ ಲ್ಯಾಬ್ ಗೆ ಚಾಲನೆ ನೀಡಲಾಗಿದೆ. ಇನ್ನು ಎರಡು ದಿನದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಟೆಸ್ಟಿಂಗ್ ಲ್ಯಾಬ್ ಕಾರ್ಯಾರಂಭ ಮಾಡಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದರು.
ಗ್ರೀನ್ ಝೋನ್ ನಲ್ಲಿದ್ದ ದಾವಣಗೆರೆ ರೆಡ್ ಜೋನ್ ತಲುಪುವ ಹಂತಕ್ಕೆ ಬಂದಿದೆ. ಜಿಲ್ಲೆಯ ಜನರು ಹೆಚ್ಚು ಜಾಗೃತಿ ವಹಿಸಬೇಕಿದೆ. ಸೇಲ್ ಡೌನ್ ಗೆ ಜನರು ಸಹಕಾರ ನೀಡಬೇಕು. ಚೆಕ್ ಪೋಸ್ಟ್ ಗಳಲ್ಲಿ ಇನ್ನಷ್ಟು ಕಟ್ಟು ನಿಟ್ಟಾಗಿ ತಪಾಸಣೆ ನಡೆಸುವಂತೆ ಸೂಚಿಸಿದ್ದೇನೆ. ಇನ್ನು ಎರಡು ದಿನಗಳಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಟೆಸ್ಟಿಂಗ್ ಲ್ಯಾಬ್ ಆರಂಭಿಸಲಾಗುವುದು ಎಂದರು.
ಕೊರೊನಾ ಪಾಸಿಟಿಸ್ ಕೇಸ್ ಇರುವ ಆಸ್ಪತ್ರೆಯಲ್ಲಿ ಬೇರೆಯವರಿಗೆ ಪ್ರವೇಶ ವಿಲ್ಲ. ಅಲ್ಲಿನ ಹೆರಿಗೆ ಆಸ್ಪತ್ರೆಯನ್ನು ಬೇರೆ ಆಸ್ಪತ್ರೆ ಸ್ಥಳಾಂತರಿಸುವಂತೆ ಸೂಚಿಸಿದ್ದೇನೆ. ಆರೋಗ್ಯ ಇಲಾಖೆ ಸಿಬ್ಬಂದಿ ಅನವಶ್ಯಕವಾಗಿ ಅಡಿಯೋ ಮಾಡಿ ಹರಿ ಬಿಟ್ಟರೆ , ಅಂಥವರ ವಿರುದ್ಧ ಕೇಸ್ ದಾಖಲಿಸಲಾಗುವುದು. ಕೊರೊನಾ ಎದುರಿಸಲು ಎಲ್ಲ ಒಗ್ಗಟಿನಿಂದ ಹೋರಾಡಬೇಕಿದೆ ಎಂದು ಕರೆ ನೀಡಿದರು.



