ಡಿವಿಜಿ ಸುದ್ದಿ, ದಾವಣಗೆರೆ : ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಅವರು ಜೂನ್ 07 ರಂದು ಬೆಂಗಳೂರಿನಿಂದ ಸಂಜೆ 6 ಗಂಟೆಗೆ ಹೊರಟು ದಾವಣಗೆರೆಗೆ ರಾತ್ರಿ 9.30 ಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.
ಮೇ 8 ರಂದು ಬೆಳಿಗ್ಗೆ 7 ಕ್ಕೆ ದಾವಣಗೆರೆಯಿಂದ ಹೊರಟು ಧಾರವಾಡಕ್ಕೆ ತೆರಳುವರು. ಹಾಗೂ ಜೂ.09 ರಂದು ಬೆಳಿಗ್ಗೆ 10.30 ಕ್ಕೆ ಹುಬ್ಬಳ್ಳಿಯಿಂದ ಹೊರಟು ಮಧ್ಯಾಹ್ನ 1.30 ಕ್ಕೆ ದಾವಣಗೆರೆಗೆ ಆಗಮಿಸಿ, ಅಂದು ಮಧ್ಯಾಹ್ನ 2.30 ಕ್ಕೆ ಚಿಗಟೇರಿ ಜಿಲ್ಲಾಆಸ್ಪತ್ರೆಯಲ್ಲಿ ಕೋವಿಡ್-19 ಪ್ರಯೋಗಾಲಯ ಉದ್ಘಾಟನೆ ನೆರವೇರಿಸುವರು.
ನಂತರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಧ್ಯಾಹ್ನ 3.30 ಕ್ಕೆ ದಾವಣಗೆರೆಯಿಂದ ಹೊರಟು ಬೆಂಗಳೂರಿಗೆ ತೆರಳಲಿದ್ದಾರೆ.



