ಡಿವಿಜಿ ಸುದ್ದಿ, ದಾವಣಗೆರೆ: ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅವರು ಆಗಸ್ಟ್ 6 ಮತ್ತು 7 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಆಗಸ್ಟ್ 6 ರ ಮಧ್ಯಾಹ್ನ 2.30 ಕ್ಕೆ ಬೆಂಗಳೂರಿನಿಂದ ಹೊರಟು ಸಂಜೆ 5.30 ಕ್ಕೆ ದಾವಣಗೆರೆಗೆ ಆಗಮಿಸಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು.
ಆಗಸ್ಟ್ 7 ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳುವರು. ಸಂಜೆ 4 ಗಂಟೆಗೆ ದಾವಣಗೆರೆಯಿಂದ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.



