ಡಿವಿಜಿ ಸುದ್ದಿ, ದಾವಣಗೆರೆ : ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ ಅವರು ಮೇ.4 ಮತ್ತು 5 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮೇ 4 ರಂದು ಮಧ್ಯಾಹ್ನ 2.30 ಗಂಟೆಗೆ ಶಿವಮೊಗ್ಗದಿಂದ ರಸ್ತೆ ಮೂಲಕ ಹೊರಟು ಮಧ್ಯಾಹ್ನ 4 ಗಂಟೆಗೆ ದಾವಣಗೆರೆಗೆ ಆಗಮಿಸುವರು. ಸಂಜೆ 5 ರಿಂದ 6 ಗಂಟೆಯವರೆಗೆ ಪ್ರವಾಸಿ ಮಂದಿರದಲ್ಲಿ ಸಂಸದರು ಹಾಗೂ ಶಾಸಕರೊಂದಿಗೆ ಚರ್ಚೆ ನಡೆಸುವರು.
ಮೇ 5 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಯಕೊಂಡ, ದಾವಣಗೆರೆ ದಕ್ಷಿಣ ಮತ್ತು ಉತ್ತರ ವಿಧಾನಸಭೆ ಕ್ಷೇತ್ರಗಳಲ್ಲಿನ ಕೋವಿಡ್-19 ವೈರಾಣು ನಿಯಂತ್ರಣದ ಕುರಿತು ಕೈಗೊಳ್ಳಲಾಗಿರುವ ಕ್ರಮ ಹಾಗೂ ಅಭಿವೃದ್ದಿ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಯಿಂದ ರಸ್ತೆ ಮೂಲಕ ಬೆಂಗಳೂರು ತಲುಪಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



