Connect with us

Dvg Suddi-Kannada News

ಮೇ. 4, 5 ರಂದು ಜಿಲ್ಲಾಉಸ್ತುವಾರಿ ಸಚಿವ ಭೈರತಿ ಬಸವರಾಜ್  ಜಿಲ್ಲಾ ಪ್ರವಾಸ

ಪ್ರಮುಖ ಸುದ್ದಿ

ಮೇ. 4, 5 ರಂದು ಜಿಲ್ಲಾಉಸ್ತುವಾರಿ ಸಚಿವ ಭೈರತಿ ಬಸವರಾಜ್  ಜಿಲ್ಲಾ ಪ್ರವಾಸ

ಡಿವಿಜಿ ಸುದ್ದಿ, ದಾವಣಗೆರೆ :

ನಗರಾಭಿವೃದ್ದಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ  ಬಸವರಾಜ ಅವರು ಮೇ.4 ಮತ್ತು 5 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಮೇ 4 ರಂದು ಮಧ್ಯಾಹ್ನ 2.30 ಗಂಟೆಗೆ ಶಿವಮೊಗ್ಗದಿಂದ ರಸ್ತೆ ಮೂಲಕ ಹೊರಟು ಮಧ್ಯಾಹ್ನ 4 ಗಂಟೆಗೆ ದಾವಣಗೆರೆಗೆ ಆಗಮಿಸುವರು. ಸಂಜೆ 5 ರಿಂದ 6 ಗಂಟೆಯವರೆಗೆ ಪ್ರವಾಸಿ ಮಂದಿರದಲ್ಲಿ ಸಂಸದರು ಹಾಗೂ ಶಾಸಕರೊಂದಿಗೆ ಚರ್ಚೆ ನಡೆಸುವರು.

ಮೇ 5 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಯಕೊಂಡ, ದಾವಣಗೆರೆ ದಕ್ಷಿಣ ಮತ್ತು ಉತ್ತರ ವಿಧಾನಸಭೆ ಕ್ಷೇತ್ರಗಳಲ್ಲಿನ ಕೋವಿಡ್-19 ವೈರಾಣು ನಿಯಂತ್ರಣದ ಕುರಿತು ಕೈಗೊಳ್ಳಲಾಗಿರುವ ಕ್ರಮ ಹಾಗೂ ಅಭಿವೃದ್ದಿ ಕಾರ್ಯಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುವರು.

ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ,  ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಯಿಂದ ರಸ್ತೆ ಮೂಲಕ ಬೆಂಗಳೂರು ತಲುಪಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 

 

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top