ಡಿವಿಜಿ ಸುದ್ದಿ, ದಾವಣಗೆರೆ: ಕಾಲೇಜ್ ಆಡಳಿತ ಮಂಡಳಿಯಿಂದ ವೈದ್ಯ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲು ಸಾಧ್ಯವಿಲ್ಲ. ಸರ್ಕಾರವೇ ಶಿಷ್ಯ ವೇತನ ನೀಡಬೇಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.
ನಗರ ಜೆಜೆಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು 16 ತಿಂಗಳ ಶಿಷ್ಯ ವೇತನಕ್ಕೆ ಆಗ್ರಹಿಸಿ ಕಳೆದ 10 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದರು. ಇಂದು ಜೆಜೆಎಂ ಮೆಡಿಕಲ್ ಕಾಲೇಜಿನ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿಯೂ ಆಗಿರುವ ಶಾಸಕ ಶಾಮನೂರು ಶಿವಶಂಕರಪ್ಪ ಅವರನ್ನು ಭೇಟಿ ಮಾಡಿ ಶಿಷ್ಯ ವೇತನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ಈ ಬಗ್ಗೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸ್ಪಷ್ಟನೆ ನೀಡಿದ ಶಾಮನೂರು ಶಿವಶಂಕರಪ್ಪ ಅವರು, ಶಿಷ್ಯ ವೇತನಕ್ಕೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಹೀಗಾಗಿ ಸರ್ಕಾರದಿಂದ ಪರಿಹಾರ ಸಿಗುವವರೆಗೂ ಪ್ರತಿಭಟನೆ ನಡೆಸಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಒಂದೆಡೆ ಸರ್ಕಾರ ಆಡಳಿತ ಮಂಡಳಿಯೇ ಶಿಷ್ಯವೇತನ ನೀಡಬೇಕು ಎಂದು ಹೇಳುತ್ತಿದೆ. ಇತ್ತೊಂದೆಡೆ ಆಡಳಿತ ಮಂಡಳಿ , ಸರ್ಕಾರವೇ ಶಿಷ್ಯ ವೇತನ ನೀಡಬೇಕು ಎಂದು ಹೇಳುತ್ತಿದೆ. ಇದರಲ್ಲಿ ಯಾರ ಮಾತು ನಂಬಬೇಕು. ಕಳೆದ 16 ತಿಂಗಳಿಂದ ಶಿಷ್ಯ ವೃತನ ಇಲ್ಲದೆ ಪರದಾಡುತ್ತಿದ್ದೇವೆ. ಜನಪ್ರತಿನಿಧಿಗಳ ಈ ರೀತಿಯ ಹೇಳಿಕೆ ಬೇಸರ ಮೂಡಿಸಿದೆ. ಆಡಳಿತ ಮಂಡಳಿ ಮತ್ತು ಸರ್ಕಾರದ ನಡುವಿನ ತಿಕ್ಕಾಟದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಬಲಿಯಾಗಿದ್ದೇವೆ ಎಂದು ಪ್ರತಿಭಟನಾ ನಿರತ ವೈದ್ಯ ಡಾ. ಹರೀಶ್ ಆಕ್ರೋಶ ವ್ಯಕ್ತಪಸಿದರು.



