Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆ ತಡೆಯಲು ಡ್ರೋನ್ ಕ್ಯಾಮರಾ  ಕಣ್ಗಾವಲು

ಪ್ರಮುಖ ಸುದ್ದಿ

ದಾವಣಗೆರೆಯಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆ ತಡೆಯಲು ಡ್ರೋನ್ ಕ್ಯಾಮರಾ  ಕಣ್ಗಾವಲು

ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್  ಹರಡದಂತೆ ತಡೆಯಲು  ಲಾಕ್ ಡೌನ್ ಮಾಡಲಾಗಿದೆ. ಲಾಕ್ ಡೌನ್ ನಿಯಮವನ್ನು ಉಲ್ಲಂಘಿಸಿ ಕೆಲವರು ಮನೆಯಿಂದ ಹೊರ ಬಂದು ಓಡಾಡುತ್ತಿದ್ದಾರೆ. ಇದನ್ನು ಮಟ್ಟ ಹಾಕಲು ಎಸ್‍ಪಿ ಹನುಮಂತರಾಯ ನೇತೃತ್ವದಲ್ಲಿ ಡ್ರೋಣ್ ಕ್ಯಾಮೆರಾ ಹದ್ದಿನ ಕಣ್ಣಿಡಲಿದೆ.

davangere police

ಲಾಕ್‍ಡೌನ್ ಆದೇಶ ಉಲ್ಲಂಘನೆ ಮಾಡಿ ಅನವಶ್ಯಕವಾಗಿ ಓಡಾಡುವವರ  ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಸಲುವಾಗಿ ಮೊದಲ ಹಂತದಲ್ಲಿ  ಆಜಾದ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ಡ್ರೋಣ್ ಕ್ಯಾಮೆರಾ ಹಾರಿಸಲಾಯಿತು.

ಆಜಾದ್ ನಗರ, ಬಾಷಾನಗರ, ವೆಂಕೊಬ ಕಾಲೊನಿ ಸೇರಿದಂತೆ ಠಾಣೆ ವ್ಯಾಪ್ತಿಯಲ್ಲಿ ಡ್ರೋಣ್ ಕ್ಯಾಮೆರಾ ಹದ್ದಿನ ಕಣ್ಣಿಟ್ಟಿದೆ. ಇದಲ್ಲದೆ ಮನೆಯಿಂದ ಹೊರಗಡೆ ಬಂದರೆ ಕೇಸ್ ದಾಖಲಿಸುವ ಎಚ್ಚರಿಕೆಯನ್ನು ನೀಡಲಾಗುತ್ತಿದೆ.

davangere police 2

ಈ ಪ್ರದೇಶದ ಪ್ರತಿಯೊಂದು  ಗಲ್ಲಿಗಲ್ಲಿಗಳಲ್ಲಿ ಡ್ರೋಣ್ ಕ್ಯಾಮೆರಾದ ಮೂಲಕ ಕಣ್ಗಾವಲು ಇರಲಿದ್ದು, ಖಾಲಿ ಜಾಗದಲ್ಲಿ ಕ್ರಿಕೆಟ್ ಆಡುವವರ, ಗುಂಪು ಸೇರುವವರ ಪತ್ತೆಗೆ ಡ್ರೋಣ್ ಕ್ಯಾಮೆರಾ ಬಳಕೆ ಆಗಲಿದೆ. ಡ್ರೋಣ್ ಕಂಡ ಕೆಲವರು ಅಚ್ಚರಿಯಿಂದ ನೋಡಿದ‌‌ ದೃಶ್ಯಗಳು, ಗುಂಪು ಸೇರಿ ಮಾತನಾಡವುದು, ಕ್ರಿಕೆಟ್ ಆಡುವ ಯುವಕರ ದೃಶ್ಯಗಳು ಡ್ರೋಣ್ ನಲ್ಲಿ ಸೇರೆಯಾಗಿವೆ.

davangere police 3

ಲಾಕ್‍ಡೌನ್ ನಿಯಮ ಉಲ್ಲಂಘನೆ ಮಾಡುವವರ ಪತ್ತೆಗೆ ಜಿಲ್ಲಾ ಪೊಲೀಸ್ ಹೊಸ ಪ್ರಯೋಗ ಮಾಡಿದೆ.ಡ್ರೋಣ್ ಕ್ಯಾಮೆರಾ  ಎರಡು ಕಿಲೋಮೀಟರ್ ವ್ಯಾಪ್ತಿಯನ್ನು ಕವರ್ ಮಾಡುವ ಸಾಮರ್ಥ್ಯ ಹೊಂದಿದ್ದು, ಸುಮಾರು 700 ಮೀಟರ್ ಎತ್ತರಕ್ಕೆ ಹಾರುತ್ತದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top