ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾ ಮೀನುಗಾರಿಕೆ ಇಲಾಖೆ ವತಿಯಿಂದ 2020-21 ನೇ ಸಾಲಿನ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಸಹಾಯಧನಕ್ಕಾಗಿ ಜಿಲ್ಲೆಯ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನು ಕೃಷಿ ಕೊಳಗಳ ನಿರ್ಮಾಣ, ಬಯೋ ಫ್ಲಾಕ್ಸ್ ಕೊಳ ನಿರ್ಮಾಣ, ಮೀನುಮರಿ ಉತ್ಪಾದನೆ ಹಾಗೂ ಪಾಲನಾ ಕೇಂದ್ರಗಳ ಸ್ಥಾಪನೆ, ಕ್ರೀಡಾ ಮೀನುಗಾರಿಕೆ, ಶೈತ್ಯೀಕರಿಸಿದ ವಾಹನಗಳು, ಆರ್‍ಎಎಸ್ ಘಟಕ ಸ್ಥಾಪನೆ, ಶೈತ್ಯಾಗಾರ, ಮಂಜುಗಡ್ಡೆ ಸ್ಥಾವರ ನಿರ್ಮಿಸುವುದು, ಅಲಂಕಾರಿಕ ಮೀನು ಉತ್ಪಾದಕ ಘಟಕ ಉಪಯೋಜನೆಗಳನ್ನು ಪ್ರಾರಂಭಿಸಲು ಸಾಮಾನ್ಯ ಫಲಾನುಭವಿಗಳಿಗೆ ಶೇ.40, ಪ.ಜಾತಿ/ಪ.ಪಂಗಡ/ ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆ.31 ಕೊನೆಯ ದಿನವಾಗಿರುತ್ತದೆ. ಆಸಕ್ತ ಫಲಾನುಭವಿಗಳು ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಬಹುದಾಗಿದೆ. ಅರ್ಹ ಮೀನುಗಾರರೆಲ್ಲ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕೆಂದು ಮೀನುಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಗಣೇಶ್.ಆರ್ ತಿಳಿಸಿದ್ದಾರೆ.



