ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 19 ನೇ ವಾರ್ಡ್ ಸದಸ್ಯ ಶಿವಪ್ರಕಾಶ್ ಆಯೋಜಿಸಿದ್ದ ಬಡ ಕುಟುಂಬದ ಜನರಿಗೆ ದಿನಸಿ ಕಿಟ್, ಮಾಸ್ಕ್ ಮತ್ತು ಸ್ಯಾನಿಟೈಜರ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಲೋಕಸಭಾ ಸದಸ್ಯ ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎ.ರವೀಂದ್ರನಾಥ್, ಎಸ್.ವಿ.ರಾಮಚಂದ್ರಪ್ಪ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಮತ್ತು ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.



