ಡಿವಿಜಿ ಸುದ್ದಿ,ದಾವಣಗೆರೆ: ಹರಿಹರ –ಶಿವಮೊಗ್ಗ ರಾಜ್ಯ ಹೆದ್ದಾರಿಯ ಹನಗವಾಡಿ ಗ್ರಾಮದ ಹೋಟೆಲ್ ಒಂದರ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಜಿಲ್ಲಾ ಪೊಲೀಸರು 4 ಕೆ.ಜಿ. 170 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತ ಮೇರೆಗೆ ದಾಳಿ ನಡೆಸಿರುವ ಪೊಲೀಸರು ಆರೋಪಿಗಳಾದ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಜನಾಪುರದ ರಾಹುಲ್, ಶಿವಮೊಗ್ಗದ ಮಲ್ಲಿಕಾರ್ಜುನ, ಭದ್ರಾವತಿ ಪೇಪರ್ ಟೌನ್‌ನ ಪ್ರಮೋದ್ ಅವರನ್ನು ಬಂಧಿಸಿದ್ದಾರೆ. ಬಂಧಿತರಿಂದ 1.25 ಲಕ್ಷ ಮೌಲ್ಯದ ಗಾಂಜಾ, ಕೃತ್ಯಕ್ಕೆ ಬಳಸಿದ್ದ ಆಟೋ ವಶಪಡಿಸಿಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ನೇತೃತ್ವದಲ್ಲಿ, ಎಎಸ್‌ಪಿ ರಾಜೀವ್, ಗ್ರಾಮಾಂತರ ಡಿವೈಎಸ್‌ಪಿ ನರಸಿಂಹ ತಾಮ್ರಧ್ವಜ ಮಾರ್ಗದರ್ಶನದಲ್ಲಿ ಸಿಪಿಐ ಶಿವಪ್ರಸಾದ್, ಸಿಬ್ಬಂದಿ ಲಿಂಗರಾಜ್, ನಾಗರಾಜ ಸುಣಗಾರ, ದ್ವಾರಕೇಶಿ, ಸತೀಶ, ಶಿವರಾಜ್, ಕೃಷ್ಣ, ರವಿ, ಸಿದ್ದರಾಜು, ಮಹಮದ್ ಇಲಿಯಾಸ್, ನಾಗರಾಜ, ಮುರುಳಿಧರ, ಸಿದ್ದಪ್ಪ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.



