ಡಿವಿಜಿ ಸುದ್ದಿ, ದಾವಣಗೆರೆ: ಕೋವಿಡ್ 19 ನಿಂದ ಕಳೆದ ಎರಡು ತಿಂಗಳಿನಿಂದ ಜಿಮ್ ಗಳನ್ನು ಕ್ಲೋಸ್ ಮಾಡಲಾಗಿದೆ. ಕೂಡಲೇ ಜಿಮ್ ತೆರೆಯಲು ಅವಕಾಶ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರಿಗೆ ಮನವಿ ಮಾಡಲಾಯಿತು.
ನಗರದಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಕ್ರೀಡಾಪಟುಗಳು ಇದ್ದು, ಅವರಿಗೆ ತುಂಬಾ ತೊಂದರೆಯಾಗುತ್ತಿದೆ ಹಾಗೂ ಸಾಮಾನ್ಯ ಜನರಿಗೂ ಫಿಟ್ನೆಸ್ ಹಾಗೂ ಆರೋಗ್ಯ ಕಾಪಾಡಿಕೊಳ್ಳಲು ಜಿಮ್ ಅವಶ್ಯ. ಹೀಗಾಗಿ ಜಿಲ್ಲಾಡಳಿತ ಜೂನ್ 1ರಿಂದ ಜಿಮ್ ಪ್ರಾರಂಭಿಸಲು ಅನುಮತಿ ನೀಡಬೇಕು ಎಂದು ಪಾಲಿಕೆ ವಿರೋಧಪಕ್ಷದ ನಾಯಕ ಎ. ನಾಗರಾಜ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಗಿತ್ತು.
ಮನವಿಗೆ ಸಕಾರಾತ್ಮವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಅನುಮತಿ ನೀಡುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ.ಬಸವರಾಜ್, ಪ್ರಧಾನ ಕಾರ್ಯದರ್ಶಿ ದಿನೇಶ್ .ಕೆ. ಶೆಟ್ಟಿ ಸದಸ್ಯರುಗಳಾದ ದೇವರಮನೆ ಶಿವಕುಮಾರ್, ಗಡಿ ಗುಡಾಳ್ ಮಂಜುನಾಥ್, ಚಮನ್ ಸಾಬ್, ಸೈಯದ್ ಚಾರ್ಲಿ ಹಾಗೂ ಹುಲ್ಮನಿ ಗಣೇಶ್ ಉಪಸ್ಥಿತರಿದ್ದರು.



