Connect with us

Dvgsuddi Kannada | online news portal | Kannada news online

ಆ.5 ರಂದು ಜಿಎಂಐಟಿ ಕಾಲೇಜಿನಲ್ಲಿ ವಿವಿಧ ಉತ್ಪನ್ನಗಳ ಪ್ರದರ್ಶನ

ದಾವಣಗೆರೆ

ಆ.5 ರಂದು ಜಿಎಂಐಟಿ ಕಾಲೇಜಿನಲ್ಲಿ ವಿವಿಧ ಉತ್ಪನ್ನಗಳ ಪ್ರದರ್ಶನ

ಡಿವಿಜಿ ಸುದ್ದಿ, ದಾವಣಗೆರೆ: ನಗರದ ಜಿಎಂ ಐಟಿ  ಮಹಾ ವಿದ್ಯಾಲಯದ ಮೆಕ್ಯಾನಿಕಲ್ ವಿಭಾಗದಿಂದ ಆ. 5 ರಂದು ಸೆಮಿನಾರ್ ಹಾಲ್ ನಲ್ಲಿ ವಿವಿಧ ಉತ್ಪನ್ನಗಳ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಪ್ರಾಂಶುಪಾಲ ಡಾ. ವೈ. ವಿಜಯ್ ಕುಮಾರ್ ತಿಳಿಸಿದರು.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ಸಂಕಷ್ಟದ ಸಮಯದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸೇರಿಕೊಂಡು ಸಮಾಜಕ್ಕೆ ಉಪಯುಕ್ತವಾಗುವಂತಹ  ಅನೇಕ ಉತ್ಪನ್ನಗಳನ್ನು ತಯಾರಿಸಿದ್ದು, ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಈ ಪ್ರದರ್ಶನವನ್ನು ಕಾಲೇಜಿನ ಮುಖ್ಯಸ್ಥ ಜಿ.ಎಂ. ಲಿಂಗರಾಜು ಚಾಲನೆ ನೀಡಲಿದ್ದು, ಸಾರ್ವಜನಿಕ ಉಪಯೋಗಕ್ಕೆ  ಈ ಉತ್ಪನ್ನಗಳು ಬಳಕೆ ಆಗಲಿವೆ. ಕಾಲೇಜಿನ ಎಲ್ಲಾ ವಿಭಾಗದಿಂದ ಎರಡು ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದ್ದು, ಒಟ್ಟು 15 ಉತ್ಪನ್ನಗಳನ್ನು ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರೊ. ತೇಜಸ್ವಿ ಕಟ್ಟಿಮನಿ, ಡಾ. ಶ್ರೀನಿವಾಸ್ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top