Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಖಾಲಿ ಹುದ್ದೆಗಳ  ಭರ್ತಿಗೆ ನೇರ ಸಂದರ್ಶನ

ದಾವಣಗೆರೆ

ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಖಾಲಿ ಹುದ್ದೆಗಳ  ಭರ್ತಿಗೆ ನೇರ ಸಂದರ್ಶನ

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ  ಅಧೀನದಲ್ಲಿ ಬರುವ ವಿವಿಧ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಫಾರ್ಮಾಸಿಸ್ಟ್ ಹುದ್ದೆ (ವೇತನ ರೂ.20,000) ಸಂಖ್ಯೆ 10, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆ (ವೇತನ ರೂ.15,000) ಸಂಖ್ಯೆ 21 ವೃಂದದ ಹುದ್ದೆಗಳನ್ನು ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನ ಮುಖಾಂತರ ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ದಾವಣಗೆರೆ, ಎಸ್.ಎಸ್.ಹೈಟೆಕ್ ಆಸ್ಪತ್ರೆ ಹತ್ತಿರ ಶ್ರೀರಾಮನಗರ ರಸ್ತೆ, ಎನ್.ಸಿ.ಸಿ ಕ್ಯಾಂಪ್ ಹತ್ತಿರ ದಾವಣಗೆರೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಆಸಕ್ತ ಅಭ್ಯರ್ಥಿಗಳು ಕಚೇರಿಯಲ್ಲಿ ಅರ್ಜಿ ಪಡೆದು ಅ.08 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ (ವಿದ್ಯಾರ್ಹತೆ, ಗ್ರಾಮೀಣ, ಕನ್ನಡ ಮಾಧ್ಯಮ, ಜಾತಿ ಪ್ರಮಾಣಪತ್ರ ಮೂಲ ಮತ್ತು ನಕಲು ಪ್ರತಿಗಳೊಂದಿಗೆ ಸಿ&ಆರ್ ರನ್ವಯವಾಗುವ ಎಲ್ಲಾ ಪೂರಕ ದಾಖಲೆಗಳೊಂದಿಗೆ ದೃಢೀಕರಿಸಿ ಅರ್ಜಿ ಸಲ್ಲಿಸತಕ್ಕದ್ದು) ಸಲ್ಲಿಸುವುದು.

ಅರ್ಜಿಗಳನ್ನು ಪರಿಶೀಲಿಸಿದ ನಂತರ ಅ.13 ರಂದು ನೇರ ಸಂದರ್ಶನಕ್ಕೆ ಹಾಜರಾಗಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿ ಹೆಚ್.ಎಸ್ ರಾಘವೇಂದ್ರಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top