Connect with us

Dvg Suddi-Kannada News

ಹೈಸ್ಕೂಲ್ ಮೈದಾನದಲ್ಲಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ವಿರೋಧ

ದಾವಣಗೆರೆ

ಹೈಸ್ಕೂಲ್ ಮೈದಾನದಲ್ಲಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣಕ್ಕೆ ವಿರೋಧ

ಡಿವಿಜಿ ಸುದ್ದಿ, ದಾವಣಗೆರೆ : ನಗರದ ಹೈಸ್ಕೂಲ್ ಮೈದಾನದಲ್ಲ ಈಗಾಗಲೇ ತಾತ್ಕಾಲಿಕವಾಗಿ ಖಾಸಗಿ ಬಸ್ ನಿಲ್ದಾಣ ನಿರ್ಮಾಣ ಮಾಡಿದ್ದು, ಇದೀಗ ಅದೇ ರೀತಿ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲು ಮಂದಾಗಿರುವ ಕ್ರಮಕ್ಕೆ ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ದಿನೇಶ್ ಕೆ .ಶೆಟ್ಟಿ, ಹೈಸ್ಕೂಲ್ ಮೈದಾನದಲ್ಲಿ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ನಿರ್ಮಾಣ ಮಾಡುವುದರಿಂದ ಕ್ರೀಡಾ ಪಟುಗಳಿಗೆ, ವಾಯು ವಿಹಾರಿಗಳಿಗೆ , ಹಿರಿಯ ನಾಗರಿಕರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ.  ಆಟದ ಮೈದಾನದಲ್ಲಿ ಬಸ್ ನಿಲ್ದಾಣ ನಿರ್ಮಾಣ ಮಾಡುವುದರಿಂದ ಪರಿಸರ ಮಾಲಿನ್ಯ ಉಂಟಾಗುವುದರ ಜೊತೆ ಕ್ರೀಡಾ ಪಟುಗಳಿಗೆ ಆಟ ಆಡಲು ಸ್ಥಳಾವಕಾಶ ಇಲ್ಲದಂತಾಗಿದೆ ಎಂದರು.

ನಗರ ಮಧ್ಯ ಭಾಗದಲ್ಲಿ ಇರುವ ಒಂದೇ ಒಂದು ಆಟದ ಮೈದಾನವನ್ನು ವಾಣಿಜ್ಯ ಉಪಯೋಗಕ್ಕಾಗಿ ಮತ್ತು ಬಸ್ ನಿಲ್ದಾಣಕ್ಕೆ ಉಪಯೋಗಿಸುವುದು ಸರಿಯಾದ ಕ್ರಮವಲ್ಲ.  ಈ ಕ್ರೀಡಾಂಗಣವನ್ನು ಕ್ರೀಡೆಗಳಿಗೆ ಮಾತ್ರ ಮೀಸಲಿಡಬೇಕು. ಕ್ರೀಡೆ ಬಿಟ್ಟು ಬೇರೆ ಉದ್ದೇಶಗಳಿಗೆ ಕ್ರೀಡಾಂಗ ಉಪಯೋಗಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ದಾವಣಗೆರೆ ಜಿಲ್ಲಾ ಕ್ರೀಡಾಪಟುಗಳ ಸಂಘ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.  ಇದಲ್ಲದೆ, ಬಸ್ ನಿಲ್ದಾಣ ವಿರೋಧಿಸಿ ಸಹಿ ಸಂಗ್ರಹ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರದ ಶ್ರೀಕಾಂತ್ ಬಗಾರೆ, ಶ್ರೀಕಾಂತ್ , ಹರೀಶ್ ಹಳ್ಳಿ, ಮಹಾವೀರ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top