ಡಿವಿಜಿ ಸುದ್ದಿ, ದಾವಣಗೆರೆ: ಹಿಂದೂ ಮಹಾ ಗಣಪತಿ ಟ್ರಸ್ಟ್ ವತಿಯಿಂದ ಮೂರನೇ ವರ್ಷದ ಗಣಪತಿ ಪ್ರತಿಷ್ಠಾಪನೆಗೆ ಇಂದು ಹಂದರ ಕಂಬ ಪೂಜೆ ನೆರವೇರಿಸಲಾಯಿತು.
ಈ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ಎಸ್. ಎ. ರವೀಂದ್ರನಾಥ್, ಮೇಯರ್ ಅಜಯ್ ಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಟ್ರಸ್ಟ್ ಸಂಸ್ಥಾಪಕ ಹಾಗೂ ಅಧ್ಯಕ್ಷ ಜೊಳ್ಳಿ ಗುರು, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಯಶವಂತ್ ರಾವ್ ಜಾಧವ್, ಪಾಲಿಕೆ ಸದಸ್ಯರಾದ ಎಸ್.ಟಿ. ವೀರೇಶ್ , ರಾಕೇಶ್ ಜಾಧವ್, ಶಿವನಗೌಡ ಪಾಟೀಲ್, ಟ್ರಸ್ಟ್ ನ ಪದಾಧಿಕಾರಿಗಳು ಭಾಗಿಯಾಗಿದ್ದರು.

ಕೊರೊನಾ ವೈರಸ್ ಹಿನ್ನೆಲೆ ಸರ್ಕಾರದ ಮಾರ್ಗಸೂಚಿ ಅನುಸರಿಸಿ, ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಟ್ರಸ್ಟ್ ನಿರ್ಧರಿಸಿದೆ. ಈ ಬಾರಿ ಯಾವುದೇ ಅದ್ಧೂರಿ ಕಾರ್ಯಕ್ರಮ ಇರುವುದಿಲ್ಲ. ಕೇವಲ ಪೂಜೆ, ಹೋಮ ನಡೆಯಲಿದ್ದು, ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷ ಜೊಳ್ಳಿ ಗುರು ತಿಳಿಸಿದರು.



