ಡಿವಿಜಿ ಸುದ್ದಿ, ಹೊನ್ನಾಳಿ: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರು ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಕೇಳಿಕೆ ನೀಡಿರುವುದನ್ನು ಖಂಡಿಸಿ ಮುಸ್ಲಿಂ ಸಂಘಟನೆಗಳಿಂದ ಹೊನ್ನಾಳಿಯಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.
ರೇಣುಕಾಚಾರ್ಯ ಹೇಳಿಕೆ ಖಂಡಿಸಿ ಮುಸ್ಲಿಂ ಸಮುದಾಯದ ವಿವಿಧ ಸಂಘಟನೆ ಮುಖಂಡರು, ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿ ರೇಣುಕಾಚಾರ್ಯ ವಿರುದ್ಧ ಘೋಷಣೆ ಕೂಗಿದರು.
ನಗರದ ಟಿ ಬಿ ವೃತ್ತದಿಂದ ತಾಲ್ಲೂಕು ಕಚೇರಿವರೆಗು ಪ್ರತಿಭಟನೆ ನಡೆಸಿದ ಮುಸ್ಲಿಂ ಸಮಾಜದವರು, ಮಸೀದಿಗಳಲ್ಲಿ ಶಸ್ತಾಸ್ತ್ರಗಳನ್ನು ಸಂಗ್ರಹಿಸುತ್ತಾರೆ ಮತ್ತು ನನ್ನ ಕ್ಷೇತ್ರದ ವಿಶೇಷ ಅನುದಾನದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡುವುದಿಲ್ಲ ಎಂಬ ಹೇಳಿಕೆ ನೀಡಿದ್ದನ್ನು ಖಂಡಿಸಿದರು.
ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್ ಹೊನ್ನಾಳಿ ಪಟ್ಟಣದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.



