ಡಿವಿಜಿ ಸುದ್ದಿ, ದಾವಣಗೆರೆ: ದೇಶದಾದ್ಯಂತ ಲಾಕ್ ಡೌನ್ ಹಿನ್ನೆಲೆ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಒಂದು ವರ್ಷದ ಹಾಸ್ಟೆಲ್ ಮತ್ತು ಪರೀಕ್ಷೆ ಶುಲ್ಕ ಪಾವತಿಯನ್ನು ಸರ್ಕಾರ ರದ್ದು ಮಾಡಬೇಕು ಎಂದು ಎನ್.ಎಸ್.ಯು.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಪಾಟೀಲ್ ಆಗ್ರಹಿಸಿದ್ದಾರೆ
ದೇಶದಲ್ಲಿ ಕೊರೋನಾ ಲಾಕ್ ಡೌನ್ ನಿಂದ ವಿದ್ಯಾರ್ಥಿಗಳು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳು ನಮ್ಮ ದೇಶದ ಆಸ್ತಿ. ಹೀಗಾಗಿ ವಿದದ್ಯಾರ್ಥಿಗಳ ಹಿತಾಸಕ್ತಿ ಹಾಗೂ ಆರೋಗ್ಯ ಇವೆರಡನ್ನೂ ಕಾಪಾಡಿಕೊಳ್ಳುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ.
ಈ ನಿಟ್ಟಿನಲ್ಲಿ ಕೊರೊನಾ ಸಂದರ್ಭದಲ್ಲೂ ಪರೀಕ್ಷೆ ಬರೆಯಲು ನಾನಾ ರಾಜ್ಯಗಳಿಂದ ವಿದ್ಯಾರ್ಥಿಗಳು ಬರುವುದರಿಂದ ಸೋಂಕಿನ ಅಪಾಯ ಹೆಚ್ಚು ಆದ್ದರಿಂದ ಎಲ್ಲರನ್ನೂ ಉತ್ತೀರ್ಣಗೊಳಿಸಿ ಎಂದು ಕೇಳಿಕೊಳ್ಳುತ್ತೇನೆ.