ಡಿವಿಜಿ ಸುದ್ದಿ, ದಾವಣಗೆರೆ: ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ನ ಗೋಡೆ ಮೇಲಿನ ಇಂದಿರಾಗಾಂಧಿ ಚಿತ್ರಕ್ಕೆ ಕಿಡಿಗೇಡಿಗಳು ಎಂಜಿನ್ ಆಯಿಲ್ ಬಳಿದು ವಿರೂಪಗೊಳಿಸಿದ ಘಟನೆ ನಡೆದಿದೆ.
ನಿನ್ನೆ ರಾತ್ರಿ ಆಯಿಲ್ ಬಳಿದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ವಿಷಯ ತಿಳಿದ ಸ್ಥಳಕ್ಕೆ ಆಗಮಿಸಿದ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು. ಈ ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.
ದಾವಣಗೆರೆಯಲ್ಲಿ ಇಂತಹ ಘಟನೆಗಳು ನಡೆಯುತ್ತಿರುವುದು ಆತಂಕ ಮೂಡಿಸಿದೆ. ಪೊಲೀಸರು ಸೂಕ್ತ ತನಿಖೆ ಮೂಲಕ ಆರೋಪಿಗಳನ್ನು ಬಂಧಿಸಬೇಕು. ಸಾಮಾಜಿಕ ಜಾಲತಾಣಗಳನ್ನು ಹುಡುಕಿದರೆ ಆರೋಪಿಗಳನ್ನು ಪತ್ತೆ ಹಚ್ಚಬಹುದು ಎಂದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್, ಅಲ್ಲಾವಲಿ ಗಾಜಿಖಾನ್, ಹುಲ್ಮನೆ ಗಣೇಶ್, ರಾಘು ದೊಡ್ಮನಿ, ಅಶ್ರಫ್ ಅಲಿ, ಕೆ.ಎಲ್.ಹರೀಶ್, ಬಸಾಪುರ ಗಿರೀಶ್ ಇದ್ದರು.



