Connect with us

Dvgsuddi Kannada | online news portal | Kannada news online

ಸಮಸ್ಯೆ ಕುರಿತು ಆಯಾ ಇಲಾಖೆಯಲ್ಲಿಯೇ ದೂರು ನೀಡುವಂತಾಗಬೇಕು: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ದಾವಣಗೆರೆ

ಸಮಸ್ಯೆ ಕುರಿತು ಆಯಾ ಇಲಾಖೆಯಲ್ಲಿಯೇ ದೂರು ನೀಡುವಂತಾಗಬೇಕು: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ

ಡಿವಿಜಿ ಸುದ್ದಿ, ದಾವಣಗೆರೆ: ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕರಿಗಳಿಗೆ ಅರ್ಜಿ ಸಲ್ಲಿಸಿದರಾಯಿತು ಎನ್ನುವ ಮನೋಭಾವ ಬದಲಾಗಬೇಕು. ಆಯಾ ಇಲಾಖೆಯಲ್ಲಿಯೇ ಅರ್ಜಿ ಸಲ್ಲಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನಿಸಬೇಕು. ಒಂದು ವೇಳೆ ಅಲ್ಲಿ ಸಮಸ್ಯೆ ಪರಿಹಾರ ಸಿಗದಿದ್ದಲ್ಲಿ, ಜನಸ್ಪಂದನದಲ್ಲಿ ಅರ್ಜಿ ಸಲ್ಲಿಸಿ ತ್ವರಿತಗತಿಯಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು  ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರ ಅವರು, ಜನಸ್ಪಂದನ ಸಭೆಗೆ ಹಲವಾರು ಬಗೆಯ ಸಮಸ್ಯೆಯ ಅರ್ಜಿಗಳು ಬರುತ್ತಿದ್ದು, ಜನಸ್ಪಂದನಕ್ಕೆ ಸಾರ್ವಜನಿಕರಿಂದ ಅರ್ಜಿಗಳು ಹೆಚ್ಚು ಬಾರದಂತೆ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು.ಅರ್ಜಿಗಳನ್ನು ಜನಸ್ಪಂದನದಲ್ಲಿ ಡಿಸಿ ಯವರಿಗೆ ನೀಡಿದರಾಯಿತು ಎಂಬ ಜನರ ಮನಸ್ಥಿತಿಯೂ ಬದಲಾಗಬೇಕು. ಆಯಾ  ಇಲಾಖೆಗೆ ಮೊದಲು ಅರ್ಜಿ ಸಲ್ಲಿಸಬೇಕು. ಅಲ್ಲಿ ಕೆಲಸವಾಗದಿದ್ದರೆ ಜನಸ್ಪಂದನದಲ್ಲಿ ಅರ್ಜಿ ಸಲ್ಲಿಸಿದಲ್ಲಿ ಇನ್ನೂ ತ್ವರಿತವಾಗಿ ತಮ್ಮ ಕೆಲಸಗಳಾಗುತ್ತವೆ ಎಂದರು.

ನಗರದ ಟ್ರೇಡ್ ಲೈಸನ್ಸ್ ಪ್ರಕರಣಗಳನ್ನು ನಿರ್ವಹಿಸುವ ನಿಟ್ಟಿನಲ್ಲಿ ಜನವರಿ 15 ರೊಳಗೆ ಪಾಲಿಕೆ ವತಿಯಿಂದ ಒಂದು ಅಭಿಯಾನ ಕೈಗೊಳ್ಳಲಾಗುವುದು. ಲೈಸನ್ಸ್ ಪಡೆಯದವರಿಗೆ ಟ್ರೇಡ್ ಲೈಸನ್ಸ್ ನೀಡುವ ಅವಕಾಶ ನೀಡಲಾಗುವುದು.  ನಕಲಿ ಟ್ರೇಡ್ ಲೈಸನ್ಸ್ ಪಡೆದವರ ವಿರುದ್ಧ ದಂಡ ವಿಧಿಸುವ ಮೂಲಕ ನಕಲಿ ಟ್ರೇಡ್ ಲೈಸನ್ಸ್ ಹಾವಳಿಯನ್ನು ತಡೆಗಟ್ಟಲು  ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ಟ್ರೇಡ್ ಲೈಸನ್ಸ್ ಪ್ರಕರಣಗಳು ಹೆಚ್ಚುತ್ತಿದ್ದು ಈ ಬಗ್ಗೆ ಆಯುಕ್ತರಿಗೆ ಲಿಖಿತವಾಗಿ ದೂರು ನೀಡಿದ್ದರೂ ಹಿಂಬರಹ ಬಂದಿರುವುದಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಟ್ರೇಡ್ ಲೈಸನ್ಸ್ ಹಾವಳಿ ನಡೆಯುತ್ತಿದ್ದು ಈ ಬಗ್ಗೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಎಂ.ಜಿ.ಶ್ರೀಕಾಂತ್ ಮನವಿ ಮಾಡಿದರು.

ಚಾಮರಾಜಪೇಟೆ ಅಂಗಡಿ ಮಾಲೀಕರು ತಮ್ಮ ಅಂಗಡಿ ಮುಂದೆ ಇರುವ ಬೀದಿ ಬದಿ ವ್ಯಾಪಾರಸ್ಥರಿಂದ ತೊಂದರೆ ಆಗುತ್ತಿದೆ. ಸ್ಮಾರ್ಟ್ ಸಿಟಿ ಕೆಲಸವೂ ನಡೆಯುತ್ತಿದ್ದು, ಆ ಕೆಲಸಗಾರರು ಸಹ ನಮ್ಮ ಬದಲಾಗಿ ಬೀದಿ ಬದಿ ವ್ಯಾಪಾರ್ಥರು ಹೇಳುವಂತೆ ಕಾರ್ಯ ವಹಿಸುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಹಿಂದಿನ ಜನಸ್ಪಂದನ ಸಭೆಗೂ ಹಾಜರಾಗಿ ಮನವಿ ಮಾಡಲಾಗಿತ್ತು. ಇದುವರೆಗೆ ಕ್ರಮ ಜರುಗಿಸಲಾಗಿಲ್ಲವೆಂದು ಮನವಿ ಮಾಡಿದರು.ಜಿಲ್ಲಾಧಿಕಾರಿಗಳು ಮಹಾನಗರಪಾಲಿಕೆ ಆಯುಕ್ತರು ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳು ಶೀಘ್ರದಲ್ಲೇ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಜಗಳೂರು ತಾಲ್ಲೂಕು ದೊಣ್ಣೆಹಳ್ಳಿ ಗ್ರಾಮದ ವಯೋವೃದ್ದ ಕೆ.ಸಣ್ಣಬಸಪ್ಪ  ಹೆಸರಿನಲ್ಲಿ ಕಾಮಗೇತನಹಳ್ಳಿ ಸರ್ವೇ ನಂ 70/2 ರಲ್ಲಿ 4 ಎಕರೆ 30 ಗುಂಟೆ ಜಮೀನಿದ್ದು ಈ ಜಮೀನು ಹೊಸಹಟ್ಟಿ ಗ್ರಾಮದ ಸಣ್ಣ ನೀರಾವರಿ ಇಲಾಖೆಯ ಚೆಕ್ ಡ್ಯಾಂ ನಿರ್ಮಿಸಿರುವ ಹಳ್ಳದ ಪಕ್ಕದಲ್ಲಿದ್ದು ಇದರ ಹಿಂಬದಿ ನೀರು ಬೆಳೆಗಳಿಗೆ ನುಗ್ಗುತ್ತಿರುವುದರಿಂದ ಬೆಳೆ ಹಾನಿಯಾಗುತ್ತಿದೆ. ಆದ್ದರಿಂದ ಒಡ್ಡು ನಿರ್ಮಿಸಿಕೊಡಬೇಕೆಂದು ಮನವಿ ಮಾಡಿದರು.ಜಿ.ಪಂ ಸಿಇಓ ತಾವೇ ಸ್ವತಃ ಭೇಟಿ ನೀಡಿ, ಪರಿಶೀಲಿಸಿ ಒಡ್ಡು ನಿರ್ಮಿಸಿಕೊಡಲು ಕ್ರಮ ವಹಿಸುವುದಾಗಿ ತಿಳಿಸಿದರು. ಜಿಲ್ಲಾಧಿಕಾರಿಗಳು ಹೆಚ್ಚುವರಿ ಅನುದಾನದಲ್ಲಿ ಈ ರೀತಿ ಒಡ್ಡು ನಿರ್ಮಿಸಲು ಕ್ರಿಯಾ ಯೋಜನೆ ತಯಾರಿಸುವಂತೆ ತಿಳಿಸಿದರು.

ನಗರದ ದೇವರಾಜ ಅರಸು ಬಡಾವಣೆಯಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಐಮ್ಯಾಕ್ಸ್ ವತಿಯಿಂದ ನೀಡುವ ಪುಸ್ತಕಗಳ ಬಿಲ್ ಕೇಳಿದರೆ ಅನಗತ್ಯ ಉತ್ತರ ನೀಡಿ, ತಮ್ಮ ಮಕ್ಕಳ ಟಿ.ಸಿ ಕೊಡುವವರೆಗೆ ಮಾತನಾಡುವ ಮೂಲಕ ದೌರ್ಜನ್ಯವೆಸಗಿದ್ದು ಈ ಶಾಲೆಯ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾಗರ್ ಎಂಬುವರು ಮನವಿ ಮಾಡಿದರು. ಜಿಲ್ಲಾಧಿಕಾರಿಗಳು ಡಿಡಿಪಿಐ ರವರು ಈ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸುವಂತೆ ಸೂಚಿಸಿದರು.

ಚನ್ನಗಿರಿ ತಾಲ್ಲೂಕಿನ ದೋಣೆಹಳ್ಳಿ ಗ್ರಾಮದಲ್ಲಿ ಗಡಿ ಗುರುತಿಸುವ ಬಗ್ಗೆ ಎರಡು ಗುಂಪುಗಳ ನಡುವೆ ವಿವಾದವಿದ್ದು, ಪೊಲೀಸರ ಸಹಾಯ ಪಡೆದು ಸರ್ವೇಯರ್‍ನಿಂದ ಸರ್ವೇ ಮಾಡಿಸಿ ಗಡಿ ಗುರುತಿಸುವ ಬಗ್ಗೆ ಕ್ರಮವಹಿಸಬೇಕೆಂದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಡಿಡಿಎಲ್‍ಆರ್ ರಾಮಾಂಜನೇಯ ಇವರಿಗೆ ತಿಳಿಸಿದರು.

ನಿಟುವಳ್ಳಿಯಲ್ಲಿ ರಾಜಾ ಕಾಲುವೆ ಹಾದು ಹೋಗಿದ್ದು ರಸ್ತೆ ಬ್ಲಾಕ್ ಆಗಿದೆ. ಮಕ್ಕಳು, ವಯಸ್ಸಾದವರು ಓಡಾಡಲಿಕ್ಕೆ ತುಂಬಾ ತೊಂದರೆ ಆಗಿದ್ದು ಇದನ್ನು ತೆರವುಗೊಳಿಸಬೇಕಂದು ಹಿರಿಯ ಸಾರ್ವಜನಿಕರೊಬ್ಬರು ಮನವಿ ಸಲ್ಲಿಸಿದರು. ವಿದ್ಯಾನಗರದಿಂದ ಎಸ್‍ಎಸ್ ಹೈಟೆಕ್ ಆಸ್ಪತ್ರೆಗೆ ಸಂಜೆಯಿಂದ ರಾತ್ರಿ ವೇಳೆ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆ ಇಲ್ಲದೇ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಆದ್ದರಿಂದ ಈ ಮಾರ್ಗಕ್ಕೆ ಕೆಎಸ್‍ಆರ್‍ಟಿಸಿ ಬಸ್ ಬಿಡಬೇಕೆಂದು ವಿದ್ಯಾನಗರ ಸಾರ್ವಜನಿಕರು ಮನವಿ ಮಾಡಿದರು ಹಾಗೂ ದಾವಣಗೆರೆ ತಾಲ್ಲೂಕಿನ ಚಿಕ್ಕ ಕುರುಬರ ಹಳ್ಳಿಗೆ ಕೆಎಸ್‍ಆರ್‍ಟಿಸಿ ಬಸ್ ವ್ಯವಸ್ಥೆ ಮಾಡಿಸಿಕೊಂಡು ಸಾರ್ವಜನಿಕರೊಬ್ಬರು ಮನವಿ ಮಾಡಿದರು. ಜಿಲ್ಲಾಧಿಕಾರಿಗಳು ಕೆಎಸ್‍ಆರ್‍ಟಿಸಿ ಡಿಸಿ ಯವರು ಈ ಮಾರ್ಗಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದರು.

ಚನ್ನಗಿರಿಯ ಭೀಮಾಜಿರಾವ್, ಖಂಡೋಬರಾವ್ ಇತರರು  ಆಶ್ರಯ ಯೋಜನೆಗೆ ತಮ್ಮ ಜಮೀನನ್ನು ಸರ್ಕಾರ ನಿಗದಿಪಡಿಸಿದ ದರಕ್ಕೆ ನೀಡುತ್ತೇವೆ ಹಾಗೂ ಇನ್ನೂ ಕೆಲವು ರೈತರು ತಮ್ಮ ಜಮೀನನ್ನು ಬಿಟ್ಟುಕೊಡಲು ಒಪ್ಪಿದ್ದಾರೆಂದು ಜನಸ್ಪಂದನ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಈ ನಿಮ್ಮ ನಿರ್ಧಾವನ್ನು ಸ್ವಾಗತಿಸುತ್ತೇನೆ. ಈ ಹಿಂದೆಯೇ ತಾವು ಒಪ್ಪಿದ್ದರೆ ಈಗಾಗಲೇ ನಿಮಗೆ ಚೆಕ್ ಸಿಕ್ಕಿರುತ್ತಿತ್ತು ಎಂದು, ಈ ಕುರಿತು ಪರಿಶೀಲಿಸಿ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಜಿ.ಪಂ ಸಿಇಓ ಪದ್ಮಾ ಬಸವಂತಪ್ಪ, ಪ್ರಭಾರ ಅಪರ ಜಿಲ್ಲಾಧಿಕಾರಿ ನಜ್ಮಾ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಪಾಲಿಕೆ ಆಯುಕ್ತ ಮಂಜುನಾಥ ಬಳ್ಳಾರಿ, ಡಿಡಿಎಲ್‍ಆರ್ ರಾಮಾಂಜನೇಯ, ಕೆಎಸ್‍ಆರ್‍ಟಿಸಿ ಡಿಸಿ ಸಿದ್ದೇಶ್ವರ್, ಡಿಡಿಪಿಐ ಪರಮೇಶ್ವರಪ್ಪ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top