Connect with us

Dvg Suddi-Kannada News

ಬಡವರಿಗೆ, ಕೂಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಸಿದ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಿವಗಂಗಾ ಬಸವರಾಜ್

ಪ್ರಮುಖ ಸುದ್ದಿ

ಬಡವರಿಗೆ, ಕೂಲಿ ಕಾರ್ಮಿಕರಿಗೆ ಆಹಾರ ಕಿಟ್ ವಿತರಸಿದ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಿವಗಂಗಾ ಬಸವರಾಜ್

ಡಿವಿಜಿ ಸುದ್ದಿ, ಚನ್ನಗಿರಿ: ಡೆಡ್ಲಿ ಕೊವಿಡ್ -19 ವೈರಸ್ ಇಡೀ ದೇಶವನ್ನೆ ಬೆಚ್ಚಿ ಬಿಳಿಸಿದೆ.‌ ವೈರಸ್ ನಿಯಂತ್ರಣಕ್ಕಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಬಡವರು , ಕೂಲಿ ಕಾರ್ಮಿಕರು ಜೀವನ ಮಾಡುವುದು ಕಷ್ಟವಾಗಿದೆ. ಇದನ್ನು ಅರಿತ ಕೋಗಲೂರಿನ ಕುವರ, ದಾವಣಗೆರೆ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಶಿವಗಂಗಾ‌ ವಿ ಬಸವರಾಜ್ ಅವರು  ಚನ್ನಗಿರಿ ಪಟ್ಟಣದಲ್ಲಿ‌ ಕೂಲಿ ಕಾರ್ಮಿಕರುಗಳಿಗೆ, ದೀನ ದಲಿತರಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೊನಾ ಮಹಾಮಾರಿ ರೋಗಕ್ಕೆ ಭಯ ಬೇಡ. ಮುಂಜಾಗೃತಿಯಿಂದ ಇದ್ದು ಮುಖಕ್ಕೆ ಮಾಸ್ಕ್ ಹಾಕಿಕೊಂಡು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು .

ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ. ಹೆಚ್. ಶ್ರೀನಿವಾಸ್ , ಪುರಸಭೆ ಸದಸ್ಯ ಇಮ್ರಾನ್ , ಲಿಂಗಣ್ಣ , ಗೌಸ್ ಪೀರ್ , ಕಾಂಗ್ರೆಸ್ ಮುಖಂಡರುಗಳಾದ ಮಂಜುನಾಥ್ , ಜೀತೇಂದ್ರ , ತನ್ವೀರ್ ಸೇರಿದಂತೆ ನೂರಾರು ಕಾರ್ಮಿಕರು ಉಪಸ್ಥಿತರಿದ್ದರು .

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top