Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾಧಿಕಾರಿ ಎಚ್ಚರಿಕೆಗೂ ಮುಷ್ಕರ ಕೈ ಬಿಡದ  ವೈದ್ಯ ವಿದ್ಯಾರ್ಥಿಗಳು

ದಾವಣಗೆರೆ

ದಾವಣಗೆರೆ: ಜಿಲ್ಲಾಧಿಕಾರಿ ಎಚ್ಚರಿಕೆಗೂ ಮುಷ್ಕರ ಕೈ ಬಿಡದ  ವೈದ್ಯ ವಿದ್ಯಾರ್ಥಿಗಳು

ಡಿವಿಜಿ ಸುದ್ದಿ, ದಾವಣಗೆರೆ: 16 ತಿಂಗಳ ಶಿಷ್ಯ ವೇತನಕ್ಕೆ ಆಗ್ರಹಿಸಿ ಜೆಜೆಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಿಂದ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಇವತ್ತು ಕೂಡ   ಮುಂದುವರಿದೆ.

ಜೆ.ಜೆ.ಎಂ. ವೈದ್ಯಕೀಯ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಹಯೋಗದೊಂದಿಗೆ ಸೋಮವಾರದಿಂದ ನಗರದ ಜಯದೇವ ವೃತ್ತದಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಶಿಷ್ಯ ವೇತನ ನೀಡುವರೆಗೂ ಮುಷ್ಕರ ಕೈ ಬಿಡುವುದಿಲ್ಲ ಎಂದು ವೈದ್ಯಕೀಯ ವಿದ್ಯಾರ್ಥಿಗಳು ಪಟ್ಟು ಮುಂದುವರಿಸಿದ್ದಾರೆ.

ಇಂದು ವೈದ್ಯ ದಿನವಾಗಿದ್ದರೂ ಧರಣಿ ಮುಂದುವರಿಸಿದ  ವೈದ್ಯ ವಿದ್ಯಾರ್ಥಿಗಳು ರಕ್ತದಾನ ಮತ್ತು ಶಾಂತವಾಗಿ ಕುಳಿತು ಪುಸ್ತಕ ಓದುವ ಮೂಲಕ ತಮ್ಮ ಹಕ್ಕಿಗಾಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳಕ್ಕೆ ನೇತ್ರ ತಜ್ಞ ಡಾ. ವಸುದೇಂದ್ರ ಭೇಟಿ ನೀಡಿ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳು ಶಿಷ್ಯ ವೇತನಕ್ಕಾಗಿ ಕಳೆದ ಮೂರು ದಿನಗಳಿಂದ ಧರಣಿ ನಡೆಸುತ್ತಿದ್ದಾರೆ.  ಸರ್ಕಾರ ಈ ಕೂಡಲೇ  ವಿದ್ಯಾರ್ಥಿಗಳ ಶಿಷ್ಯ ವೇತನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

jjm davangere 2

ವೈದ್ಯಕೀಯ ವಿದ್ಯಾರ್ಥಿಗಳು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಾ ಪಾಳಿಯ ಮೇಲೆ ಹೋರಾಟದಲ್ಲಿ ಭಾಗಿಯಾಗುತ್ತಿದ್ದಾರೆ. ಸರ್ಕಾರ ತನ್ನ ಕರ್ತವ್ಯ ಮರೆಯಬಾದರು ಎಂದು ತಿಳಿಸಿದರು.

ಇಂದು ಕೂಡ ಜಿಲ್ಲಾಧಿಕಾರಿ ಮಹಾಮತೇಶ್ ಬೀಳಗಿ ಅವರು  ವೈದ್ಯ ವಿದ್ಯಾರ್ಥಿಗಳಿಗೆ ಪತ್ರದ ಮೂಲಕ ಎಚ್ಚರಿಕೆ ನೀಡಿದ್ದು, ಸಂಜೆ 6 ಗಂಟೆ ನಂತರ ಪ್ರತಿಭಟನೆ ಮುಂದುವರಿಸಿದರೆ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಇಂದು   30ಕ್ಕೂ  ಹೆಚ್ಚು  ವೈದ್ಯಕೀಯ ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

ಪಿಜಿ ವಿದ್ಯಾರ್ಥಿ ಡಾ. ಹರೀಶ್  , ಡಾ.ರಾಹುಲ್‌, ಡಾ.ಮೇಘನಾ, ಡಾ. ನಿಧಿ ಸೇರಿದಂತೆ ನೂರಾರು ವೈದ್ಯ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top