ಡಿವಿಜಿ ಸುದ್ದಿ, ದಾವಣಗೆರೆ : ಜೆಜೆಎಂ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿಗಳು 16 ತಿಂಗಳ ಸ್ಟೈಫಂಡ್ ಬಿಡುಗಡೆಗೆ ಆಗ್ರಹಿಸಿ ಕಳೆದ ಆರು ದಿನಗಳಿಂದ ನಡೆಸುತ್ತಿರುವ ಜಯದೇವ ಸರ್ಕಲ್‍ನಲ್ಲಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಭೇಟಿ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮುಖ್ಯಮಂತ್ರಿ ಶೀಘ್ರವೇ ಒಳ್ಳೆಯ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಭರವಸೆ ನೀಡಿದರು.
ಸುದದ್ದಿಗಾರೊಂಗಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹಾಗೂ ವೈದ್ಯಕೀಯ ಸಚಿವರೊಂದಿಗೆ ಈ ಕುರಿತು ಚರ್ಚಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳು ಕೂಡಲೇ ಕ್ರಮ ಕೈಗೊಳ್ಳುತ್ತಾರೆ ಎಂದು ಪ್ರತಿಭಟನಾನಿರತ ವೈದ್ಯ ವಿದ್ಯಾರ್ಥಿಗಳಿಗೆ ತಿಳಿಸಿದರು.
ಈ ಸಂದರ್ಭದಲ್ಲಿ ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕರಾದ ರವೀಂದ್ರನಾಥ್, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ್ ಮತ್ತಿತರರು ಇದ್ದರು.



